Wednesday, January 22, 2025

ಇಂದಿನಿಂದ ಚೈತ್ರಾ ಕುಂದಾಪುರ ವಿಚಾರಣೆ!

ಬೆಂಗಳೂರು: ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಚೈತ್ರಾ ಕುಂದಾಪುರ ಅವರ ವಿಚಾರಣೆ ಇಂದಿನಿಂದ ಆರಂಭವಾಗಲಿದೆ. ನಿನ್ನೆ ಬಂಧನಕ್ಕೊಳಗಾದ ಅವರನ್ನು ರಾತ್ರಿ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿತ್ತು.

ಸದ್ಯ 10 ದಿನಗಳ ಕಾಲ ಕಸ್ಟಡಿಗೆ ಪಡೆದಿರುವ ಸಿಸಿಬಿ ಪೊಲೀಸರು, ಸಿಸಿಬಿ ಕಚೇರಿಗೆ ಕರೆತಂದು ವಿಚಾರಣೆ ನಡೆಸಲಿದ್ದಾರೆ. CCB, ACP ರೀನಾ ಸುವರ್ಣ ಅವರಿಂದ ವಿಚಾರಣೆ ನಡೆಯಲಿದೆ. ಬಳಿಕ ಹಣ ಪಡೆದ ಸ್ಥಳಗಳಲ್ಲಿ ಮಹಜರು ಮಾಡಲಿದ್ದಾರೆ.

ಇದನ್ನೂ ಓದಿ: ಸ್ವಾಮೀಜಿ ಬಂಧನವಾಗಲಿ ಎಲ್ಲಾ ಸತ್ಯಾ ಹೊರಬೀಳುತ್ತೆ : ಚೈತ್ರ ಕುಂದಾಪುರ

ಚೈತ್ರಾ ಕುಂದಾಪುರ ಉದ್ಯಮಿ ಗೋವಿಂದ ಬಾಬು ಪೂಜಾರಿ ಮಾದರಿಯಲ್ಲೆ ಹಲವರಿಗೆ ವಂಚನೆ ಮಾಡಿರುವ ಸಾಧ್ಯತೆ ಹಿನ್ನೆಲೆ ಎಲ್ಲಾ ಆಯಾಮದಲ್ಲಿಯೂ ಬಂಧಿತ ಮೋಹನ್ ಕುಮಾರ್ ಅಲಿಯಾಸ್ ಗಗನ್ ಕಡೂರು, ರಮೇಶ್, ಧನರಾಜ್, ಶ್ರೀಕಾಂತ್, ಪ್ರಜ್ವಲ್​ ಅವರನ್ನು ವಿಚಾರಣೆ ನಡೆಸಲಾಗುತ್ತದೆ.

 

RELATED ARTICLES

Related Articles

TRENDING ARTICLES