Sunday, December 22, 2024

ಮುಂಗಾರು ಚುರುಕು, ಸೆ. 20ರವರೆಗೂ ಮಳೆ!

ಬೆಂಗಳೂರು : ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಚುರುಕುಗೊಂಡಿದ್ದು ಸೆಪ್ಟೆಂಬರ್ 20ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಇದನ್ನೂ ಓದಿ: ಕರ್ನಾಟಕ ಗೆಜೆಟಿಯರ್​ ಇಲಾಖೆಗೆ ರೋಹಿಣಿ ಸಿಂಧೂರಿ ವರ್ಗಾವಣೆ!

ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ, ಉತ್ತರ ಒಳನಾಡಿನ ಕೆಲವೆಡೆ ಹಗುರ ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, ಕೆಲವು ಕಡೆಗಳಲ್ಲಿ ಹಗುರ ಮಳೆಯಾಗಲಿದೆ.

RELATED ARTICLES

Related Articles

TRENDING ARTICLES