Sunday, December 22, 2024

ಯಾವ ಪುರುಷಾರ್ಥಕ್ಕೆ ಸಿಎಂ ಆಗಿದ್ದೀರಿ? : ಬಿಜೆಪಿ

ಬೆಂಗಳೂರು : ಎಲ್ಲದಕ್ಕೂ ಕೇಂದ್ರ ಸರ್ಕಾರದ ಮೇಲೆ ಬೊಟ್ಟು ಮಾಡುತ್ತಾ ಪತ್ರ ಬರೆಯುತ್ತೇನೆ ಎನ್ನುತ್ತಾ ಕಾಲ ಕಳೆಯುತ್ತಿರುವ ನೀವು ಯಾವ ಪುರುಷಾರ್ಥಕ್ಕೆ ಮುಖ್ಯಮಂತ್ರಿ ಆಗಿದ್ದೀರಿ? ಎಂದು ಸಿದ್ದರಾಮಯ್ಯ ವಿರುದ್ಧ ರಾಜ್ಯ ಬಿಜೆಪಿ ವಾಗ್ದಾಳಿ ನಡೆಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ರಾಜ್ಯದಲ್ಲಿ ನೂರಾರು ಸಮಸ್ಯೆಗಳು ಎದುರಾಗಿದೆ. ಈಗಿರುವಾಗ ಸಿದ್ದರಾಮಯ್ಯ ಅವರು ಬೀದಿಯಲ್ಲಿ ನಿಂತು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವ ಬೃಹನ್ನಳೆ ನಾಟಕವಾಡುತ್ತಿದ್ದಾರೆ ಎಂದು ಕುಟುಕಿದೆ.

ಗ್ಯಾರಂಟಿ ಈಡೇರಿಸಲು 10 ಕಿಲೋ ಅಕ್ಕಿ ಬೇಕು, ಕೇಂದ್ರಕ್ಕೆ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ. ರಾಜ್ಯದಲ್ಲಿ ಬರಗಾಲ ತಾಂಡವ ಆಡುತ್ತಿದೆ‌, ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ. ಕಾವೇರಿಯಲ್ಲಿ ನೀರಿಲ್ಲ ಆದರೂ ತಮಿಳುನಾಡಿಗೆ ನೀರು ಬಿಟ್ಟಿದ್ದೇವೆ, ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ ಎನ್ನುವ ನೀವು ಮುಖ್ಯಮಂತ್ರಿಯೇ ಎಂದು ಪ್ರಶ್ನಿಸಿದೆ.

ಗೂಂಡಾ ಸಚಿವರ ಉಪಟಳ

ರಾಜ್ಯದಲ್ಲಿ ಕಲುಷಿತ ನೀರು ಪೂರೈಕೆಯಿಂದ ಅಪಾರ ಸಾವು-ನೋವು ಆದಾಗಲೂ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ ಅಂತೀರಿ. ರಾಜ್ಯದಲ್ಲಿ 200ಕ್ಕೂ ಹೆಚ್ಚು ರೈತರ ಸರಣಿ ಆತ್ಮಹತ್ಯೆ ಆದಾಗಲೂ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ, ರಾಜ್ಯ ಸರ್ಕಾರದ ಸಂಪುಟದಲ್ಲಿ ಗೂಂಡಾ ಸಚಿವರುಗಳ ಉಪಟಳ ಹೆಚ್ಚಾಗಿದೆ. ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ ಎಂದರೆ ಹೇಗೆ? ಎಂದು ಟ್ವೀಟ್​ ಮೂಲಕ ಛೇಡಿಸಿದೆ.

RELATED ARTICLES

Related Articles

TRENDING ARTICLES