Sunday, December 22, 2024

ತಾಯಿ, ಇಬ್ಬರು ಹೆಣ್ಣು ಮಕ್ಕಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಚಾಮರಾಜನಗರ : ಮಹಿಳೆ ಮತ್ತು ಇಬ್ಬರು ಮಕ್ಕಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಪತ್ನಿ ಮೇಘ(24), ಮಕ್ಕಳಾದ ಪುನ್ವಿತಾ(6) ಹಾಗೂ ಮನ್ವಿತಾ(3) ಅನುಮಾನಸ್ಪದವಾಗಿ ಮೃತ ಪಟ್ಟವರು. ಘಟನೆ ಸಂಬಂಧ ಪತಿ ಮೇಲೆ ಶಂಕೆ ವ್ಯಕ್ತವಾಗಿದ್ದು, ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸುತ್ತಿರುವ ಆರೋಪ ಕೇಳಿಬಂದಿದೆ.

ಕೌಟುಂಬಿಕ ಕಲಹ ಹಿನ್ನಲೆ ಪತ್ನಿ ಹಾಗೂ ಮಕ್ಕಳನ್ನ ಕೊಂದು ಆತ್ಮಹತ್ಯೆ ಎಂದು ಬಿಂಬಿಸುತ್ತಿರುವ ಆರೋಪ ಪತಿ ಅಭಿ ಅಲಿಯಾಸ್ ಧನಂಜಯ್ ವಿರುದ್ಧ ಕೇಳಿಬಂದಿದೆ. ಸ್ಥಳಕ್ಕೆ ತೆರಕಣಾಂಬಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅತ್ತೆ, ಮಾವ, ಬಾಮೈದ ಅರೆಸ್ಟ್

ಬೆಳಿಗ್ಗೆಯಿಂದಲೂ ಮನೆಯಲ್ಲಿ ಗಲಾಟೆ ನಡೆದಿತ್ತು ಎನ್ನಲಾಗಿದೆ. ಹೆಂಡತಿ ಮೇಘ ಮತ್ತು ಇಬ್ಬರೂ ಹೆಣ್ಣು ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದಿದ್ದಾನೆ ಎಂದು ಮೃತ ಮೇಘಳ ತಂದೆ ಆರೋಪ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಪತಿ ಅಭಿ, ಅತ್ತೆ ನಿರ್ಮಲಮ್ಮ, ಮಾವ ಮಲ್ಲಿಕಾರ್ಜುನ ಹಾಗೂ ಅಭಿ ಸಹೋದರ ಪುಟ್ಟುರನ್ನು ಪೊಲೀಸರು ಬಂಧಿಸಿ, ತನಿಖೆ ಮುಂದುವರಿಸಿದ್ದಾರೆ.

RELATED ARTICLES

Related Articles

TRENDING ARTICLES