Wednesday, January 22, 2025

ಮಾಜಿ ಗೃಹ ಸಚಿವರ ಆಪ್ತನ ಅಶ್ಲೀಲ ವಿಡಿಯೋ ವೈರಲ್?

ಶಿವಮೊಗ್ಗ : ತೀರ್ಥಹಳ್ಳಿಯ ಹಿರಿಯ ರಾಜಕೀಯ ಮುಖಂಡರೊಬ್ಬನ ಅಶ್ಲೀಲ ವಿಡಿಯೋ ವೈರಲ್ ಆಗಿದೆ.

ವಿಡಿಯೋದಲ್ಲಿ ಇರುವವರು ಹಿರಿಯ ಮುಖಂಡ ಸುಬ್ರಹ್ಮಣ್ಯ ಎನ್ನಲಾಗಿದೆ. ಈತ ತೀರ್ಥಹಳ್ಳಿಯ ಶಾಸಕ ಹಾಗೂ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಆಪ್ತ ಎಂದು ತಿಳಿದುಬಂದಿದೆ. ತೀರ್ಥಹಳ್ಳಿಯ ಲಾಡ್ಜ್​ ವೊಂದರಲ್ಲಿ ಘಟನೆ ನಡೆದಿದೆ ಎನ್ನಲಾಗುತ್ತಿದೆ.

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಇತ್ತೀಚಿನ ದಿನಗಳಲ್ಲಿ ಅಶ್ಲೀಲ ವಿಡಿಯೋಗಳು ಹೆಚ್ಚಾಗಿ ವೈರಲ್​ ಆಗುತ್ತಿವೆ. ಕೆಲ ದಿನಗಳ ಹಿಂದಷ್ಟೇ ಈ ಸಂಬಂಧ ಪ್ರಕರಣ ​ಕೂಡ ದಾಖಲಾಗಿತ್ತು. ಇದೀಗ ಮತ್ತೊಂದು ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​​ ಆಗಿದೆ.

ಆಡಳಿತರೂಢ ಪಕ್ಷಕ್ಕೆ ಆಹಾರ

ಸುಬ್ರಹ್ಮಣ್ಯ ಅವರು ಆರಗ ಜ್ಞಾನೇಂದ್ರ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಇದೀಗ ವೈರ್​ ಆಗಿರುವ ವಿಡಿಯೋ ಕೂಡ ಅವರದ್ದೇ ಅಂತ ಹೇಳಲಾಗುತ್ತಿದೆ. ಇದು ಪಕ್ಷಕ್ಕೆ ಮುಜುಗರ ತರಿಸಿದೆ. ಅಲ್ಲದೇ, ಆಡಳಿತರೂಢ ಕಾಂಗ್ರೆಸ್​ ಹಾಗೂ ನೆಟ್ಟಿಗರಿಗೆ ಆಹಾರವಾದಂತಿದೆ.

RELATED ARTICLES

Related Articles

TRENDING ARTICLES