ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಮೂರು ದಿನಗಳ ಅವಧಿಗೆ ಗಣೇಶನ ಮೂರ್ತಿ ಪ್ರತಿಷ್ಠಾಪನೆ ಮಾಡುವ ಸಂಬಂಧ ಪಾಲಿಕೆ ಹೊರಡಿಸಿದ್ದ ಠರಾವು ಪ್ರಶ್ನಿಸಿ ಅಂಜುಮನ್ ಇಸ್ಲಾಂ ಸಂಸ್ಥೆಯು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಧಾರವಾಡ ಹೈಕೋರ್ಟ್ ಪೀಠ ವಜಾಗೊಳಿಸಿದೆ.
ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಮೂರು ದಿನಗಳ ಕಾಲ ಗಣೇಶನ ಮೂರ್ತಿ ಪ್ರತಿಷ್ಠಾಪಿಸಲು ಪಾಲಿಕೆಯಲ್ಲಿ ಠರಾವು ಪಾಸು ಮಾಡಲಾಗಿತ್ತು. ಹುಬ್ಬಳ್ಳಿಯ ಅಂಜುಮನ್ ಇಸ್ಲಾಂ ಸಂಸ್ಥೆಯು ಈ ಠರಾವಿಗೆ ತಡೆಯಾಜ್ಞೆ ನೀಡುವಂತೆ ಕೋರಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು.
ಪ್ರಕರಣದ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ಪೀಠ ಅಂಜುಮನ್ ಇಸ್ಲಾಂ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಆ ಮೂಲಕ ಈದ್ಗಾ ಮೈದಾನದಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ಕೊಡುವುದು ಪಾಲಿಕೆಗೆ ಬಿಟ್ಟಂತಾಗಿದೆ. ಪಾಲಿಕೆಯಲ್ಲಾದ ಠರಾವು ಪ್ರಕಾರ ಮೂರು ದಿನಗಳ ಕಾಲ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶನ ಮೂರ್ತಿ ಪ್ರತಿಷ್ಠಾಪಿಸಲು ಯಾವುದೇ ಅಡೆತಡೆ ಇಲ್ಲದಂತಾಗಿದೆ.