ದಾವಣಗೆರೆ : ‘ಕಟ್ಟಿಗೆ ಹಾಡ್ತದೆ, ಕಬ್ಬಿಣ ಓಡ್ತದೆ, ಗಾಳಿ ಮಾತನಾಡ್ತದೆ’ ಎಂದು ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅಚ್ಚರಿಯ ಭವಿಷ್ಯ ನುಡಿದಿದ್ದಾರೆ.
ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಮಾವಾಸ್ಯೆ ಬಳಿಕ ಮಳೆ ಬರಲಿದೆ, ಆತಂಕಪಡುವ ಅಗತ್ಯವಿಲ್ಲ. ಆದರೆ, ಕಾರ್ತಿಕ, ಸಂಕ್ರಾಂತಿ ವೇಳೆಗೆ ರಾಜ್ಯದಲ್ಲಿ ಕೆಲ ಅವಘಢಗಳು ನಡೆಯುವ ಸಾಧ್ಯತೆ ಇದೆ ಎಂಚು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.
ಮನುಷ್ಯ ಗೊತ್ತಿಲ್ಲದೆ ಮಾಡಿದ ತಪ್ಪುಗಳನ್ನು ಭಗವಂತ ಕ್ಷಮಿಸುತ್ತಾನೆ. ಆದರೆ, ತಿಳಿದೂ ತಪ್ಪುಗಳನ್ನು ಮಾಡಿದಾಗ ಕ್ಷಮಿಸಲಾರ. ಇತ್ತೀಚಿನ ದಿನಗಳಲ್ಲಿ ಗೊತ್ತಿದ್ದರೂ ಮಾನವ ಪ್ರಕೃತಿ, ನೆಲ, ಜಲ ಇವುಗಳ ನಿರಂತರ ದುರುಪಯೋಗ ಮಾಡುತ್ತಿದ್ದಾನೆ. ಹೀಗಾಗಿ, ನಾವು ಅನೇಕ ರೀತಿಯ ಪ್ರಕೃತಿ ವಿಕೋಪ ಎದುರಿಸುತ್ತಿದ್ದೇವೆ ಎಂದು ಬೇಸರಿಸಿದರು.
100 ವರ್ಷಗಳ ಕಾಲಜ್ಞಾನ ರುಜು
ಯಾವುದು ಸಮಾಜಕ್ಕೆ ಶಾಂತಿ ನೆಮ್ಮದಿ ನೀಡುತ್ತದೆಯೋ ಅದೇ ಧರ್ಮ. ನೂರಾರು ವರ್ಷಗಳಲ್ಲಿ ಹೇಳಿದ್ದು ಸತ್ಯ ಕಾಲಜ್ಞಾನವೇ ಗುರುಗಳ ಸಂಪತ್ತಾಗಿದೆ. ಹಿಂದೆ ಕಾಲಜ್ಞಾನದಲ್ಲಿ ‘ಕಟ್ಟಿಗೆ ಹಾಡ್ತದೆ, ಕಬ್ಬಿಣ ಓಡ್ತದೆ, ಗಾಳಿ ಮಾತನಾಡ್ತದೆ’ ಅಂತ ಹೇಳಲಾಗಿದೆ. ಇದೀಗ ಅದು ಸತ್ಯವಾಗಿದೆ. ಕಟ್ಟಿಗೆ ಮತ್ತು ಕಬ್ಬಿಣ ಅಂದರೆ ಇಂದು ರೈಲುಗಳು ಬಂದಿರುವ ಬಗ್ಗೆ, ಗಾಳಿ ಮಾತನಾಡ್ತದೆ ಅಂದ್ರೆ ಮೊಬೈಲ್ ಬಂದಿರುವುದಕ್ಕೆ ಸಾಕ್ಷಿ ಎಂದು ವಿಶ್ಲೇಷಿಸಿದರು.