Wednesday, January 22, 2025

ಮೋದಿ ಅಲ್ಲ, ಮನಮೋಹನ್ ಸಿಂಗ್ ಬಂದರು ಏನು ಮಾಡೋಕಾಗಲ್ಲ : ಪ್ರತಾಪ್ ಸಿಂಹ

ಮೈಸೂರು : ಒಬ್ಬ ಜನ ಪ್ರತಿನಿಧಿಗೆ ಸಾಮಾನ್ಯ ಜ್ಞಾನ ಇರಬೇಕು. ಪ್ರಧಾನಿ ನರೇಂದ್ರ ಮೋದಿ ಅಲ್ಲ.. ಮನಮೋಹನ್ ಸಿಂಗ್ ಬಂದರು ಈ ವಿಚಾರದಲ್ಲಿ ಏನು ಮಾಡೋಕಾಗಲ್ಲ ಎಂದು ರಾಜ್ಯ ಸರ್ಕಾರಕ್ಕೆ ಸಂಸದ ಪ್ರತಾಪ್ ಗುಡುಗಿದರು.

ಸರ್ವ ಪಕ್ಷ ಸಭೆಗೆ ಪ್ರಧಾನಿ ಸಮಯ ಕೊಡುತ್ತಿಲ್ಲ ಎಂಬ ಕಾಂಗ್ರೆಸ್ ಹೇಳಿಕೆ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಅವರು, ಇದು ಕಾವೇರಿ ನಿರ್ವಹಣಾ ಪ್ರಾಧಿಕಾರ ಹಾಗೂ ಸುಪ್ರೀಂ ಕೋರ್ಟ್ ನಲ್ಲಿ ಡಿಸೈಡ್ ಆಗಬೇಕು ಎಂದು ಕುಟುಕಿದರು.

ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಬದಲು ಸ್ಟಾಲಿನ್ ಅವರಿಗೆ ಕರೆ ಮಾಡಲಿ. ಕಾವೇರಿ ನೀರು ಬಿಡುವುದಕ್ಕೆ ಆಗಲ್ಲ ಅಂತ ಹೇಳಲಿ. ಇವರಿಗೆ ಲೋಕಸಭಾ ಚುನಾವಣೆ ಮುಖ್ಯನಾ? ಅಥವಾ ರಾಜ್ಯದ ಜನರ ಹಿತಸಾಕ್ತಿ ಮುಖ್ಯನಾ ಎಂದು ಪ್ರತಾಪ್ ಸಿಂಹ ಪ್ರಶ್ನೆ ಮಾಡಿದರು.

ಸ್ಟಾಲಿನ್​ರ DMK ಮೈತ್ರಿ ಮುಖ್ಯ

ತಮಿಳು ನಾಡಿಗೆ ನೀರು ಬಿಡಬೇಡಿ. ವಾಸ್ತವ ಸ್ಥಿತಿಯನ್ನು ಕೋರ್ಟ್ ಮುಂದಿಡಿ ಅಂತ ಸರ್ಕಾರಕ್ಕೆ ನಾನು ಹೇಳಿದ್ದೆ. ಮೊನ್ನೆಯ ಸಭೆಯಲ್ಲಿ ಅದನ್ನೇ ಹೇಳಿದ್ದೆ. ಆದರೆ, ಕಾಂಗ್ರೆಸ್ ಸರ್ಕಾರಕ್ಕೆ ಸ್ಟಾಲಿನ್ ಜೊತೆ ಒಳ್ಳೆಯ ನಂಟಿದೆ. ಸಿದ್ದರಾಮಯ್ಯ ಸರ್ಕಾರಕ್ಕೆ ರಾಜ್ಯ ರೈತರ ಹಿತ ಬೇಕಾಗಿಲ್ಲ. ಸ್ಟಾಲಿನ್ ಅವರ ಡಿಎಂಕೆ ಜೊತೆ ಮೈತ್ರಿ ಮುಖ್ಯ ಎಂದು ವಾಗ್ದಾಳಿ ನಡೆಸಿದರು.

RELATED ARTICLES

Related Articles

TRENDING ARTICLES