Wednesday, January 22, 2025

ಇಂದು ಸಿಎಂ ಸಿದ್ದರಾಮಯ್ಯ ತೆಲಂಗಾಣಕ್ಕೆ: ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗಿ!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಇಂದು ತೆಲಂಗಾಣಕ್ಕೆ ತೆರಳಲಿದ್ದು ಹೈದರಾಬಾದ್ ನಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಬೆಳಗ್ಗೆ 11 ಗಂಟೆಗೆ ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ತೆರಳಲಿರುವ ಸಿಎಂ ಮಧ್ಯಾಹ್ನ 2 ಗಂಟೆಗೆ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಹೈದರಾಬಾದ್ ನಲ್ಲೇ ವಾಸ್ತವ್ಯ ಹೂಡಲಿದ್ದು ನಾಳೆ ಬೆಳಗ್ಗೆ 7 ಗಂಟೆಗೆ ಹೈದರಾಬಾದ್ ನ ಬೇಗಂಪೇಟ್ ವಿಮಾನ ನಿಲ್ದಾಣದ ಮೂಲಕ ಕಲಬುರಗಿಗೆ ಪ್ರಯಾಣ ಬೆಳೆಸಲಿದ್ದಾರೆ.

ಇದನ್ನೂ ಓದಿ: ಸ್ಟುಡಿಯೋ ಬೀಗ ಮುರಿದು ಕ್ಯಾಮೆರಾಗಳನ್ನು ಕದ್ದ ಐನಾತಿ ಕಳ್ಳ

ಬಳಿಕ, ಬೆಳಗ್ಗೆ 8.30 ಕ್ಕೆ ಕಲಬುರಗಿಯ ಎಸ್‌ವಿಪಿ ವೃತ್ತದಲ್ಲಿ ಸರ್ಧಾರ್ ವಲ್ಲಭ ಬಾಯ್ ಪಟೇಲ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಲಿದ್ದಾರೆ. ಮಧ್ಯಾಹ್ನ ೩ ಗಂಟೆಗೆ ಕಲಬುರಗಿಯಿಂದ ಬೆಂಗಳೂರು ಕಡೆಗೆ ಸಿಎಂ ಪ್ರಯಾಣ ಬೆಳೆಸಲಿದ್ದಾರೆ.

RELATED ARTICLES

Related Articles

TRENDING ARTICLES