Monday, December 23, 2024

ಮೋದಿ ಜನ್ಮದಿನಕ್ಕೆ ಶುಭಕೋರಿದ ದೇವೇಗೌಡ

ಬೆಂಗಳೂರು : 73ನೇ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್​ ವರಿಷ್ಠ ಹೆಚ್​.ಡಿ. ದೇವೇಗೌಡ ಅವರು ಶುಭಾಶಯ ಕೋರಿದ್ದಾರೆ.

ಈ ಕುರಿತು Xನಲ್ಲಿ ಪೋಸ್ಟ್​ ಮಾಡಿರುವ ಅವರು, ‘ಪ್ರಧಾನಿ ನರೇಂದ್ರ ಮೋದಿ ಅವರಿಗೆ ನನ್ನ ಆತ್ಮೀಯವಾದ ಶುಭಾಶಯಗಳು. 73ನೇ ಜನ್ಮದಿನದಂದು ಸರ್ವಶಕ್ತನಾದ ಭಗವಂತನು ನಿಮಗೆ ದೇಶ ಸೇವೆ ಮಾಡಲು ಇನ್ನೂ ಉತ್ತಮ ಆರೋಗ್ಯವನ್ನು ನೀಡಲಿ’ ಎಂದು ಹಾರೈಸಿದ್ದಾರೆ.

ಇನ್ನೂ 5 ದಿನಗಳ ವಿಶೇಷ ಸಂಸತ್ ಅಧಿವೇಶನದಲ್ಲಿ ಭಾಗಿಯಾಗಲು ದೇವೇಗೌಡ ಅವರು ಇಂದು ದೆಹಲಿಗೆ ತೆರಳಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ದೃಷ್ಟಿಯಿಂದಲೂ ದೇವೇಗೌಡ ಅವರ ದೆಹಲಿ ಪ್ರವಾಸ ಭಾರಿ ಕುತೂಹಲ ಕೆರಳಿಸಿದೆ.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್​ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಸೇರಿದಂತೆ ಬಿಜೆಪಿ ಪ್ರಮುಖರನ್ನು ಭೇಟಿ ಮಾಡಿ, ಮೈತ್ರಿ ಕುರಿತು, ಸೀಟು ಹಂಚಿಕೆ ಕುರಿತು ಚರ್ಚಿಸುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

RELATED ARTICLES

Related Articles

TRENDING ARTICLES