ಬೆಂಗಳೂರು : ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಎರಡು ದಿನ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣವಿದ್ದು, ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆಯಿದೆ. ಕಾರವಾರ, ದಾವಣಗೆರೆ ಸೇರಿದಂತೆ ಇನ್ನಿತರ ಜಿಲ್ಲೆಗಳಲ್ಲಿ ಶನಿವಾರ ಮಳೆಯಾಗಿದ್ದು, ಇಂದೂ ಮುಂದುವರಿಯಲಿದೆ.
ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಯಾದಗಿರಿ, ಬೀದರ, ರಾಯಚೂರ, ಕೊಪ್ಪಳ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಾಯುಭಾರ ಕುಸಿತ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗುವ ಹಿನ್ನೆಲೆ ಮುಂದಿನ ಒಂದು ವಾರ ಬೆಂಗಳೂರಿನಲ್ಲಿ ಸಂಜೆ ಅಥವಾ ರಾತ್ರಿ ಮಳೆ ಸಾಧ್ಯತೆಯಿದೆ. ಈ ವಾಯುಭಾರ ಕುಸಿತ ಆಂಧ್ರಪ್ರದೇಶ ತಮಿಳುನಾಡು ಮೂಲಕ ರಾಜ್ಯಕ್ಕೆ ಪ್ರವೇಶ ಮಾಡಲಿದೆ. ಪ್ರತಿ ಗಂಟೆಗೆ 35ರಿಂದ 40 ಕಿ.ಮೀ ಬಿರುಗಾಳಿ ಬೀಸಲಿದೆ.