Wednesday, January 22, 2025

ಗಂಡು ಮಗುವಿಗೆ ತಂದೆಯಾದ ಧ್ರುವ ಸರ್ಜಾ!

ಬೆಂಗಳೂರು : ಸ್ಯಾಂಡಲ್‌ವುಡ್‌ ನಟ ಆಕ್ಷನ್​ ಪ್ರಿನ್ಸ್​ ಧ್ರುವ ಸರ್ಜಾ ಕುಟುಂಬದಲ್ಲೀಗ ಗೌರಿ ಗಣೇಶ ಹಬ್ಬದಂದು ಸಂಭ್ರಮ ಮನೆ ಮಾಡಿದೆ. ಕುಟುಂಬಕ್ಕೆ  ಹೊಸ ಅತಿಥಿಯ ಆಗಮನವಾಗಿದೆ. ಧ್ರುವ ಅವರ ಪತ್ನಿ ಪ್ರೇರಣಾ ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ಇಂದು ಮುಂಜಾನೆ ಪ್ರೇರಣಾ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಇದೀಗ ದಂಪತಿಗಳು ಗಂಡು ಮಗುವಿಗೆ ತಂದೆಯಾಗಿದ್ದಾರೆ. ಕಳೆದ ವರ್ಷ 2022ರ ಅಕ್ಟೋಬರ್ ನಲ್ಲಿ ಹೆಣ್ಣು ಮಗುವನ್ನು ಬರಮಾಡಿಕೊಂಡಿದ್ದ ದಂಪತಿ ಈಗ ಎರಡನೇ ಮಗುವನ್ನು ಗೌರಿ-ಗಣೇಶ ಹಬ್ಬದ ದಿನ ಬರಮಾಡಿಕೊಂಡಿದ್ದಾರೆ.

ಕಳೆದ ವಾರ ತಮ್ಮ ತೋಟದ ಮನೆದಯಲ್ಲಿ ಸೀಮಂತ ಶಾಸ್ತ್ರ ಮಾಡಿದ್ದರು. ಧ್ರುವ ಸರ್ಜಾ ಮತ್ತು ಪ್ರೇರಣ 2019 ನವೆಂಬರ್ 24ರಂದು ದಾಂಪತ್ಯಕ್ಕೆ ಕಾಲಿಟ್ಟರು. ಮದುವೆಯಾಗಿ 3 ವರ್ಷಗಳ ಬಳಿಕ ಮೊದಲ ಮಗುವನ್ನು ಸ್ವಾಗತಿಸಿದ್ದರು.

RELATED ARTICLES

Related Articles

TRENDING ARTICLES