Wednesday, January 22, 2025

ಲೈಂಗಿಕ ಕಿರುಕುಳ ನೀಡಿದ್ರಾ ಕ.ವಿ.ಪ್ರ.ನಿ EE?

ರಾಯಚೂರು : ನಗರದ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ‌ ನಿಯಮಿತದ 220 ಕೆ.ವಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ‌ದ ಪ್ರಭಾರಿ EE ಶ್ರೀನಿವಾಸ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ:ಖರೀದಿ ಭರಾಟೆ; ಮಾರುಕಟ್ಟೆಯಲ್ಲಿ ಜನಜಂಗುಳಿ!

ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆ ಪ್ರತಿಭಟಿಸಿ ಆಕ್ರೋಶ ಹೊರ ಹಾಕಿದ್ದಾರೆ. ಮಾನಸಿಕವಾಗಿ ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ ಪ್ರಭಾರಿ EE ಶ್ರೀನಿವಾಸನನ್ನು ಅಮಾನತ್ತುಗೊಳಿಸುವಂತೆ ಮಹಿಳೆ ಆಗ್ರಹಿಸಿದ್ದಾರೆ.

ಲೈಂಗಿಕ ದೌರ್ನನ್ಯದ ವಿಚಾರದಲ್ಲಿ ನನ್ನ ಮರ್ಯಾದೆ ಹಾಳಾಗಬಾರದು ಅಂತಾ ನಾನು ಎಲ್ಲೂ ಹೇಳಿರಲಿಲ್ಲ. ಆದರೆ, ಇತ್ತೀಚೆಗೆ ಅವರು ಸಾಕಷ್ಟು ಮಹಿಳೆಯರಿಗೆ ಹಿಂಸೆ ನೀಡುತ್ತಿದ್ದಾರೆ ಎಂದು ಹಲವವು ಮಹಿಳೆಯರು ಆರೋಪಿಸಿದ್ದಾರೆ. ಮೇಲಾಧಿಕಾರಿಗಳಿಗೆ ದೂರು ನೀಡಿ 22 ದಿನಗಳಾದರೂ ಕ್ರಮ ಕೈಗೊಳ್ಳದ ಹಿನ್ನೆಲೆ ಪ್ರತಿಭಟನೆ ನಡೆಸಿ ಮಹಿಳೆ ಆಕ್ರೋಶ ಹೊರಹಾಕಿದ್ದಾರೆ.

RELATED ARTICLES

Related Articles

TRENDING ARTICLES