Wednesday, January 22, 2025

ವಾಟ್ಸಾಪ್‌ನಲ್ಲಿ ಪತ್ನಿಗೆ ತ್ರಿವಳಿ ತಲಾಖ್ ನೀಡಿದ ಪತಿ!: ಪತ್ನಿ ದೂರು

ಬೆಂಗಳೂರು : ಸುಳ್ಯದ ಜಯನಗರ ನಿವಾಸಿ ಮಿಸ್ರಿಯಾ ಎಂಬ ಮಹಿಳೆಗೆ ವಿದೇಶದಲ್ಲಿರುವ ಪತಿ ವಾಟ್ಸಾಪ್ ಸಂದೇಶದ ಮೂಲಕ ದಿಢೀರ್ ತ್ರಿವಳಿ ತಲಾಖ್ ನೀಡಿದ ಘಟನೆ ನಡೆದಿದೆ.

ಕೇರಳ ತ್ರಿಶ್ಯೂರ್ ಮೂಲದ ಅಬ್ದುಲ್ ರಶೀದ್ ಏಳು ವರ್ಷಗಳ ಹಿಂದೆ ಸುಳ್ಯ ಜಯನಗರದ ಮಿಸ್ರಿಯಾ ಎಂಬಾಕೆಯನ್ನು ವಿವಾಹವಾಗಿದ್ದರು. ಅವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಎರಡು ವರ್ಷಗಳ ಹಿಂದೆ ಮಿಸ್ರಿಯಾ ಅವರನ್ನು ವಿದೇಶಕ್ಕೆ ಕರೆಸಿಕೊಂಡಿದ್ದ ರಶೀದ್ ಬಳಿಕ ಎರಡನೇ ಮಗುವಿನ ಹೆರಿಗೆಗಾಗಿ ಸುಳ್ಯಕ್ಕೆ ಕರೆತಂದು ಪತ್ನಿಯ ತವರು ಮನೆಯಲ್ಲಿ ಬಿಟ್ಟು ವಿದೇಶಕ್ಕೆ ಉದ್ಯೋಗಕ್ಕೆ ತೆರಳಿದ್ದರು. ಆದರೆ ಕಳೆದ ಆರು ತಿಂಗಳಿನಿಂದ ಸಂಸಾರದಲ್ಲಿ ವಿರಸ ಉಂಟಾಗಿತ್ತು.

ಇದನ್ನೂ ಓದಿ : ಸನಾತನ ಧರ್ಮವನ್ನು ತೊಡೆದು ಹಾಕುವ ಅಗತ್ಯವಿದೆ : ಉದಯನಿಧಿ ಸ್ಟಾಲಿನ್​ ಪುನರುಚ್ಚರಣೆ !

ಈ ಬಗ್ಗೆ ಸಂಬಂಧಿಕರು, ಹಿರಿಯರು ಮಾತನಾಡಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಿದ್ದರು. ಆದರೆ ಇದಕ್ಕೆ ಆಸ್ಪದ ನೀಡದ ರಶೀದ್, ಪತ್ನಿಯ ವಾಟ್ಸಾಪ್‌ಗೆ ತ್ರಿವಳಿ ತಲಾಖ್‌ನ ಸಂದೇಶ ಕಳುಹಿಸಿದ್ದಾನೆ. ಇದರಿಂದ ನೊಂದ ಮಿಸ್ರಿಯಾ ಸುಳ್ಯ ಪೊಲೀಸರಿಗೆ ನ್ಯಾಯ ಕೊಡಿಸುವಂತೆ ದೂರು ನೀಡಿದ್ದಾರೆ. ಮುಸ್ಲಿಂ ಪ್ರೊಟೆಕ್ಷನ್ ಆಫ್ ರೈಟ್ ಆಕ್ಟ್ 2019 ರ ಪ್ರಕಾರ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES