Wednesday, January 22, 2025

ಕಿದ್ವಾಯಿ ಆಸ್ಪತ್ರೆ ಅಕ್ರಮ: ತನಿಖೆಗೆ CM ಆದೇಶ

ಬೆಂಗಳೂರು : ಕಿದ್ವಾಯಿ ಆಸ್ಪತ್ರೆ ಅಕ್ರಮ ಆರೋಪದ ಬಗ್ಗೆ CM ಸಿದ್ದರಾಮಯ್ಯ ತನಿಖೆಗೆ ಆದೇಶಿಸಿದ್ದಾರೆ.

ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಪೆಟ್‌ ಸ್ಕ್ಯಾನ್‌ ಖರೀದಿ, ಔಷಧ ಖರೀದಿ ಸೇರಿದಂತೆ ವಿವಿಧ ಟೆಂಡರ್‌ಗಳಲ್ಲಿ ನಡೆದಿರುವ ಅಕ್ರಮ ಹಾಗೂ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ದೊರೆಯುತ್ತಿಲ್ಲ ಎಂಬ ದೂರುಗಳ ಹಿನ್ನೆಲೆಯಲ್ಲಿ IAS ಅಧಿಕಾರಿ ನೇತೃತ್ವದಲ್ಲಿ ಮೂರು ಮಂದಿ ಸದಸ್ಯರ ತಂಡದಿಂದ ತನಿಖೆ ನಡೆಸಿ ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಮಾಡಿದ್ದಾರೆ.

ಇದನ್ನೂ ಓದಿ: 3 ಡಿಸಿಎಂಗಳು ಬೇಕಾ ಅಂತ ಹೈಕಮಾಂಡ್‌ ನಿರ್ಧರಿಸುತ್ತೆ : ಸಚಿವ ಜಾರಕಿಹೋಳಿ

ಈ ಬಗ್ಗೆ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಟಿಪ್ಪಣಿ ಬರೆದಿರುವ ಅವರು, ಕಿದ್ವಾಯಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ದೊರೆಯುತ್ತಿಲ್ಲ, ಟೆಂಡರ್‌ ಹಾಗೂ ಔಷಧ ಖರೀದಿಯಲ್ಲಿ ಸಾಕಷ್ಟು ಅಕ್ರಮಗಳು ನಡೆದಿವೆ ಎಂಬ ವ್ಯಾಪಕ ದೂರುಗಳು ಬಂದಿವೆ.

ಈ ಹಿನ್ನೆಲೆಯಲ್ಲಿ ಒಬ್ಬ ಐಎಎಸ್‌ ಅಧಿಕಾರಿ ನೇತೃತ್ವದಲ್ಲಿ ಉತ್ತಮ ಚಾರಿತ್ರ್ಯವುಳ್ಳ ಸಹಕಾರ ಇಲಾಖೆಯ ಒಬ್ಬ ಅಧಿಕಾರಿ ಹಾಗೂ ಆರ್ಥಿಕ ಇಲಾಖೆಯ ಅಧಿಕಾರಿಗಳನ್ನು ಒಳಗೊಂಡ ತಂಡವನ್ನು ಕೂಡಲೇ ರಚನೆ ಮಾಡಿ. ಎರಡು ವಾರಗಳ ಒಳಗಾಗಿ ಪಾರದರ್ಶಕ ತನಿಖಾ ವರದಿ ಸಲ್ಲಿಸಬೇಕು ಎಂದು ಸೂಚನೆ ನೀಡಿದ್ದಾರೆ.

RELATED ARTICLES

Related Articles

TRENDING ARTICLES