Sunday, December 22, 2024

ಪ್ರಧಾನಿ ನರೇಂದ್ರ ಮೋದಿ ಭೇಟಿ ವಿಷಯ ಹಂಚಿಕೊಂಡ ಸಂಸದೆ ಸುಮಲತಾ

ಬೆಂಗಳೂರು : ಮಂಡ್ಯ ಮತ್ತು ಕರ್ನಾಟಕದ ಹಲವಾರು ಸಮಸ್ಯೆಗಳ ಕುರಿತು ಚರ್ಚೆ ಹಿನ್ನೆಲೆ ದೆಹಲಿಯಲ್ಲಿ  ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿಯಾಗಿದ್ದ ವಿಷಯವನ್ನು ಟ್ವೀಟ್ ಮೂಲಕ ಹಂಚಿಕೊಂಡ ಸಂಸದೆ ಸುಮಲತಾ ಅಂಬರೀಶ್.

ನಿನ್ನೆ ಸಂಸದೆ ಸುಮಲತಾ ಅಂಬರೀಶ್ ಅವರು ಪ್ರಧಾನಿ ನರೇಂದ್ರ ಮೋದಿಯವರುನ್ನು ಭೇಟಿ ಮಾಡಲೆಂದು ಹೋಗಿದ್ದರು. ಈ ಹಿನ್ನೆಲೆ ಪ್ರಧಾನಿ ಮೋದಿಯವರನ್ನು ಸಂಸತ್ತಿನ ಪ್ರಧಾನಿ ಕಚೇರಿಯಲ್ಲಿ ಭೇಟಿ ಮಾಡಿರುವ ವಿಚಾರವನ್ನು ಇಂದು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.

ಇದನ್ನು ಓದಿ : ಹುಡುಗಿಯರಿಗೆ ಕರೆ ಮಾಡಿ ಕಾಡಿಸುತ್ತಿದ್ದ ಕಿಡಿಗೇಡಿಗೆ ಬಿತ್ತು ಭರ್ಜರಿ ಗೂಸಾ

ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮಾತುಕತೆ ನಡುವೆ ಪ್ರಧಾನಿ ಮೋದಿ ಅವರ ಭೇಟಿ ಮಹತ್ವ ಪಡೆದಿದೆ. ನಮ್ಮೆಲ್ಲರ ಹೆಮ್ಮೆಯ ಪ್ರಧಾನ ಮಂತ್ರಿಗಳಾದ ಮಾನ್ಯ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದು, ಅವರ 73ನೇ ಜನ್ಮ ದಿನದ ಶುಭಾಶಯಗಳನ್ನು ತಿಳಿಸಿದೆ. ಮತ್ತು ಇತ್ತೀಚೆಗಷ್ಟೇ ನಡೆದ G20 ಶೃಂಗಸಭೆಯ ಯಶಸ್ವಿಗೂ ಶುಭಾಶಯಗಳನ್ನು ತಿಳಿಸಿದೆ ಎಂದು ಸುಮಲತಾ ಅವರು ಹಂಚಿಕೊಂಡಿದ್ದಾರೆ.

ಇನ್ನೂ ಈ ಸಂದರ್ಭದಲ್ಲಿ ನನ್ನ ಕ್ಷೇತ್ರ ಮಂಡ್ಯ ಮತ್ತು ಕರ್ನಾಟಕದ ಹಲವಾರು ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಲಾಗಿದ್ದು, ಅದಕ್ಕೆ ಸಂಬಂಧಿಸಿದ ಅನೇಕ ಸಲಹೆ ಸಹಕಾರವನ್ನು ಮಾನ್ಯ ಪ್ರಧಾನ ಮಂತ್ರಿಗಳು ನೀಡಿದ್ದಾರೆ. ಸಾಕಷ್ಟು ಒತ್ತಡ ಮತ್ತು ಬಿಡುವಿಲ್ಲದ ಕೆಲಸಗಳ ನಡುವೆಯೂ ಕಡಿಮೆ ಸಮಯದಲ್ಲಿ ನನ್ನ ಭೇಟಿಗೆ ಅವಕಾಶ ನೀಡಿದ ಮಾನ್ಯ ಶ್ರೀ ನರೇಂದ್ರ ಮೋದಿ ಅವರಿಗೆ ಧನ್ಯವಾದಗಳು, ಹಾಗೂ ಕಠಿಣ ಪರಿಶ್ರಮ ಮತ್ತು ದೇಶದ ಬಗೆಗಿನ ದೂರದೃಷ್ಟಿ ಯಾವಾಗಲೂ ನಮಗೆ ಸ್ಪೂರ್ತಿ ಹಾಗೂ ಮಾದರಿ ಎಂದು ಸಂಸದೆ ಸುಮಲತಾ ಅಂಬರೀಶ್ ಅವರು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.

RELATED ARTICLES

Related Articles

TRENDING ARTICLES