Wednesday, January 22, 2025

‘ಕಾವೇರಿ’ ವಿಚಾರ: ಇಂದು ರಾಜ್ಯದ ಸಂಸದರ ಜೊತೆ ದೆಹಲಿಯಲ್ಲಿ ಸಿಎಂ ಸಭೆ

ಬೆಂಗಳೂರು : ಕಾವೇರಿ ನದಿ ನೀರು ವಿಚಾರವಾಗಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನವದೆಹಲಿಯಲ್ಲಿ ರಾಜ್ಯದ ಎಲ್ಲ ಸಂಸದರ ಸಭೆ ಕರೆಯಲಾಗಿದೆ ಎಂದು ಮಂಗಳವಾರ ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಈ ವಿಚಾರವಾಗಿ ಮಾಹಿತಿ ನೀಡಿದ ಅವರು ಕಾವೇರಿ ನದಿ ನೀರಿನ ವಿಚಾರವಾಗಿ ಸುಪ್ರೀಂ ಕೋರ್ಟ್​​ನಲ್ಲಿ ವಿಚಾರಣೆ ನಡೆಯಲಿದ್ದು ಹಾಗೂ ಕೇಂದ್ರ ಸಚಿವರು ಹಾಗೂ ರಾಜ್ಯದ ಸಂಸದರನ್ನು ಭೇಟಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನು, ಸಚಿವರಾದ ಚೆಲುವರಾಯಸ್ವಾಮಿ, ಮಹದೇವಪ್ಪ, ಹೆಚ್.ಕೆ ಪಾಟೀಲ್ ಹಾಗೂ ರಾಜ್ಯದ ಪ್ರತಿನಿಧಿಗಳು ದೆಹಲಿಗೆ ತೆರಳುತ್ತಿದ್ದೇವೆ.

ಇದನ್ನೂ ಓದಿ : ಬರದಿಂದ 40 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ಹಾನಿ: ಸಚಿವ ಕೃಷ್ಣಭೈರೇಗೌಡ!

ನಾಳೆ ಎಲ್ಲಾ ಸಂಸದರ ಸಭೆ ನಡೆಯಲಿದ್ದು, ನಮ್ಮ ರಾಜ್ಯದ ರೈತರ ಹಿತ ಕಾಯಲು ಅಗತ್ಯ ಕೆಲಸ ಮಾಡುತ್ತೇವೆ ಎಂದು ಅವರು ಹೇಳಿದರು.

RELATED ARTICLES

Related Articles

TRENDING ARTICLES