Sunday, December 8, 2024

ಒಂದು ತಿಂಗಳ ಬಾಣಂತಿಯ ಮೇಲೆ ಸಾಮೂಹಿಕ ಅತ್ಯಾಚಾರ, ಹತ್ಯೆ!

ಗುವಾಹಟಿ: ಒಂದು ತಿಂಗಳ ಬಾಣಂತಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಹತ್ಯೆಗೈದಿರುವ ಘಟನೆ ಸೋಮವಾರ ರಾತ್ರಿ ಅಸ್ಸಾಮಿನ ಮೋರಿಗಾಂವ್ ಜಿಲ್ಲೆ ಪಸಾಟಿಯಾ ಪ್ರದೇಶದಲ್ಲಿ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:ವಾಟ್ಸಾಪ್‌ ಚಾನೆಲ್ ಆರಂಭಿಸಿದ ಸಿಎಂ ಸಿದ್ದರಾಮಯ್ಯ!

ನಿಕಿತಾ ದೇವಿ (25)ಯ ಅತ್ಯಾಚಾರಕ್ಕೆ ಒಳಗಾದ ಬಾಣಂತಿ, ಈಕೆಯ ಪತಿ ಸಮೀಪದ ಚಿತ್ರಮಂದಿರದಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿದ್ದು, ಕರ್ತವ್ಯ ನಿಮಿತ್ತ ಮನೆಯಿಂದ ಹೊರಗೆ ಹೋಗಿದ್ದರು. ಈ ವೇಳೆ ನಿಕಿತಾ ದೇವಿ ತನ್ನ ನವಜಾತ ಶಿಶುವಿನೊಂದಿಗೆ ಮನೆಯಲ್ಲಿದ್ದಾಗ ಬಾಗಿಲು ಮುರಿದು ಒಳನುಗ್ಗಿದ ಅಪರಿಚಿತ ದುಷ್ಕರ್ಮಿಗಳು ಆಕೆಯ ಮೇಲೆ ಅತ್ಯಾಚಾರವೆಸಗಿ ಉಸಿರುಗಟ್ಟಿಸಿ ಕೊಂದುಹಾಕಿದ್ದಾರೆ ಎಂದು ವರದಿಗಳು ತಿಳಿಸಿವೆ.

ತನಿಖೆಯನ್ನು ಆರಂಭಿಸಿರುವ ಪೊಲೀಸರು ಮರಣೋತ್ತರ ಪರೀಕ್ಷೆಯ ವರದಿಗಾಗಿ ಕಾಯುತ್ತಿದ್ದಾರೆ.

RELATED ARTICLES

Related Articles

TRENDING ARTICLES