Sunday, December 22, 2024

ನೀರಿನ ತೊಟ್ಟಿ ಗೋಡೆ ಕುಸಿದು ವಿದ್ಯಾರ್ಥಿ ಸಾವು

ರಾಮನಗರ : ನೀರಿನ ತೊಟ್ಟಿಯ ಗೋಡೆ ಕುಸಿದು ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಹೆಚ್. ಗೊಲ್ಲಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ.

ಬಿಡದೆ ಹೋಬಳಿಯ ಹೆಚ್. ಗೊಲ್ಲಹಳ್ಳಿ ಗ್ರಾಮದ ಕೌಶಿಕ್ (12) ಮೃತ ಬಾಲಕ. ಎಂಬ ವಿದ್ಯಾರ್ಥಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 6ನೇ ತರಗತಿಯಲ್ಲಿ ಓಲದುತ್ತಿದ್ದನು. ಶಾಲೆಯಲ್ಲಿ ಶಿಥಿಲಾವಸ್ಥೆಯಾಗಿದ್ದ, ನೀರು ಶೇಖರಣೆಯ ತೊಟ್ಟಿ ಕುಸಿದು ಕೌಶಿಕ್ ಮತ್ತು ಮತ್ತೊಬ್ಬ ವಿದ್ಯಾರ್ಥಿ ಮೇಲೆ ಬಿದ್ದಿದೆ.

ಇದನ್ನು ಓದಿ : ಸುಪ್ರೀಂ ಕೋರ್ಟ್ ಆದೇಶ ವಿರೋಧ; ಖಾಲಿ ಮಡಕೆ ಒಡೆದು ಪ್ರತಿಭಟನೆ

ಗೋಡೆ ಕುಸಿದು ಬಿದ್ದ ಪರಿಣಾಮ ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ದುರಾದೃಷ್ಟವಶಾತ್ ಚಿಕಿತ್ಸೆ ಫಲಿಸದೇ ಕೌಶಿಕ್ ಸಾವನ್ನಪ್ಪಿದ್ದಾನೆ. ಬಳಿಕ ಬಾಲಕನ ಮೃತದೇಹವನ್ನು ದಯಾನಂದ ಸಾಗರ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಮೃತ ಬಾಲಕನ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಈ ಘಟನಾ ಸಂಬಂಧ ಶಾಲಾ ಸಿಬ್ಬಂದಿ ಹಾಗೂ ಶಿಕ್ಷಕರ ನಿರ್ಲಕ್ಷದಿಂದ ಈ ಅನಾಗಹುತ ನಡೆದಿದೆ ಎಂದು ಪೋಷಕರು ಆರೋಪ ಮಾಡಿದ್ದು, ಬಿಡದಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Related Articles

TRENDING ARTICLES