Monday, December 23, 2024

ಕಾವೇರಿ ವಿಚಾರ: ಮೌನ ಮುರಿದ ನಟ ಶಿವರಾಜ್​ ಕುಮಾರ್​!

ಬೆಂಗಳೂರು : ಸ್ಯಾಂಡಲ್ ವುಡ್ ತಾರೆಯರ ಮೇಲೆ ಕಾವೇರಿ ಹೋರಾಟಗಾರರು ಮುಗಿ ಬೀಳುತ್ತಿದ್ದಂತೆಯೇ ಒಬ್ಬೊಬ್ಬರೇ ಈ ಕುರಿತು ಪ್ರತಿಕ್ರಿಯೆ ನೀಡುತ್ತಿದ್ದಾರೆ.

ಕಾವೇರಿ ವಿಚಾರವಾಗಿ ನಟ ದರ್ಶನ್, ಸುದೀಪ್ ಟ್ವೀಟ್ ಮಾಡಿ ಕಾವೇರಿ ಪರವಾಗಿ ದನಿಗೂಡಿಸಿದ್ದರು. ಇದೀಗ ನಟ ಶಿವರಾಜ್ ಕುಮಾರ್, ಈ ವಿಷಯವಾಗಿ ವಿಡಿಯೋ ಒಂದನ್ನು ಬಿಡುಗಡೆ ಮಾಡಿ, ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಇಂದು ಸುಪ್ರೀಂ​ನಲ್ಲಿ ‘ಕಾವೇರಿ’ ಅರ್ಜಿ ವಿಚಾರಣೆ!

ರೈತ ದೇಶದ ಬೆನ್ನೆಲುಬು, ರೈತನ ಬೆನ್ನೆಲುಬು ಕಾವೇರಿ. ಈ ವರ್ಷ ರಾಜ್ಯದಲ್ಲಿ ಮಳೆ ಕಡಿಮೆ ಆಗಿರುವ ಕಾರಣ ಈಗಾಗಲೇ ನಮ್ಮ ರೈತರು ಬಹಳ ಸಂಕಷ್ಟದಲ್ಲಿದ್ದಾರೆ. ಎರಡು ರಾಜ್ಯದ ನಾಯಕರು ಹಾಗೂ ನ್ಯಾಯಾಲಯ ಇದನ್ನು ಮನಸ್ಸಿನಲ್ಲಿಟ್ಟುಕೊಂಡು ಈ ಬಗ್ಗೆ ಒಳ್ಳೆಯ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಕೇಳಿಕೊಳ್ಳುತ್ತಿದ್ದೇನೆ ಎಂದಿದ್ದಾರೆ.

RELATED ARTICLES

Related Articles

TRENDING ARTICLES