Friday, November 22, 2024

ಹುಬ್ಬಳ್ಳಿ ಈದ್ಗಾ ಮೈದಾನ ಗಣೇಶ ಅದ್ದೂರಿ ವಿಸರ್ಜನೆ

ಹುಬ್ಬಳ್ಳಿ : ವಿವಾದಿತ ಮೈದಾನ ಈದ್ಗಾ ಮೈದಾನಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಯನ್ನು ಇಂದು ವಿಸರ್ಜನೆ ಮಾಡಲಾಯಿತು.

ಹುಬ್ಬಳ್ಳಿಯ ರಾಣಿ ಚೆನ್ನಮ್ಮ ಮೈದಾನ ಅಂದರೆ ಈದ್ಗಾ ಮೈದಾನದ ಗಣಪತಿ ವಿಸರ್ಜನೆ ಮಾಡುವ ಮುನ್ನಾ ಅದ್ದೂರಿ ಮೆರವಣಿಗೆ ನಡೆಸಲಾಯಿತು. ಜೊತೆಗೆ ಶಾಂತಿಯುತವಾಗಿ ವಿಸರ್ಜನೆ ಕಾರ್ಯಕ್ರಮ ನಡೆದಿದೆ.

ಈದ್ಗಾ ಮೈದಾನದಲ್ಲಿ ಮೂರು ದಿನಗಳ ಕಾಲ ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿತ್ತು. ಇಂದು ಸಕಲ ವಾದ್ಯ-ವೈಭವದೊಂದಿಗೆ ವಿಸರ್ಜನೆ ಮಾಡಲಾಗಿದೆ. ಗಣಪತಿ ವಿಸರ್ಜನೆ ಕಾರ್ಯಕ್ರಮಕ್ಕೆ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ವಿದ್ಯುಕ್ತವಾಗಿ ಚಾಲನೆ ನೀಡಿದರು. ಮೆರವಣಿಗೆ ಮಾಡುವ ಮೂಲಕ ವಿಶೇಷವಾಗಿ ಪೂಜೆ ಸಲ್ಲಿಸಿ ಹುಬ್ಬಳ್ಳಿಯ ಗ್ಲಾಸ್ ಹೌಸ್ ಹತ್ತಿರವಿರುವ ಬಾವಿಯಲ್ಲಿ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡಲಾಯಿತು.

ಈ ವೇಳೆ ಶಾಸಕರಾದ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ, ಮಹಾನಗರ ಪಾಲಿಕೆ ಸದಸ್ಯರು, ಬಿಜೆಪಿ ಪಕ್ಷದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು, ಹಿಂದೂ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಹಾಗೂ ಗಜಾನನ ಭಕ್ತರು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

RELATED ARTICLES

Related Articles

TRENDING ARTICLES