Sunday, December 22, 2024

ಕಾವೇರಿ ಕಿಚ್ಚು.. ಕನ್ನಡಿಗರಿಗಾಗಿ ಹೋರಾಟಕ್ಕೆ ಸಿದ್ಧ ಎಂದ ದುನಿಯಾ ವಿಜಯ್

ಬೆಂಗಳೂರು : ಕರ್ನಾಟಕದಾದ್ಯಂತ ಕಾವೇರಿ ವಿವಾದ ಭುಗಿಲೆದ್ದಿದೆ. ಕರ್ನಾಟಕದ ರೈತರು ನೀರಿಲ್ಲದೇ ಕಂಗಾಲಾಗಿರೋವಾಗ ತಮಿಳುನಾಡಿಗೆ ಹೆಚ್ಚಿನ ನೀರು ಹರಿಸಲು ಆದೇಶ ಬಂದಿರೋದು ಕನ್ನಡಿಗರಿಗೆ ಬರದ ನಡುವೆ ಬರೆ ಎಳೆದಂತಾಗಿದೆ.

ರಾಜ್ಯಾದ್ಯಂತ ಈ ಬಗ್ಗೆ ಪ್ರತಿಭಟನೆಗಳು ನಡೀತಾ ಇವೆ. ಕನ್ನಡ ಸಿನಿರಂಗ ಕೂಡ ಈ ವಿಚಾರದಲ್ಲಿ ಮೌನ ವಹಿಸಿಲ್ಲ. ಸ್ಯಾಂಡಲ್‌ವುಡ್ ತಾರೆಯರು ಕರುನಾಡ ರೈತರ ಪರ ನಿಂತಿದ್ದಾರೆ. ರಾಘವೇಂದ್ರ ರಾಜ್‌ಕುಮಾರ್, ಡಾ.ಶಿವರಾಜ್‌ಕುಮಾರ್ ಬಳಿಕ ಇದೀಗ ನಟ ದುನಿಯಾ ವಿಜಯ್ ಕೂಡ ಕಾವೇರಿ ವಿವಾದದ ಬಗ್ಗೆ ಮಾತನಾಡಿದ್ದಾರೆ.

ಈ ಕುರಿತು xನಲ್ಲಿ ಪೋಸ್ಟ್​ ಮಾಡಿರುವ ಅವರು, ‘ಕಾವೇರಿ ಈ ನಾಡಿಗೆ ಬರೀ ನೀರಲ್ಲ ಈ ಮಣ್ಣಿನ ಆಳಕ್ಕಿಳಿದ ಜಲರೂಪದ ಬೇರು, ಪ್ರತಿಯೊಬ್ಬ ಕನ್ನಡಿಗನೂ ತಲೆಮೇಲೆ ಹೊತ್ತು ತಿರುಗೋ ದೈವರೂಪದ ತೇರು. ಇಷ್ಟು ದಿನ ಆಕಾಶಕ್ಕೆ ಮುಖ ಮಾಡಿ ನಿಂತಿದ್ದ ಅನ್ನದಾತ ಇಂದು ನ್ಯಾಯಾಲಯದ ಕಡೆ ಮುಖ ಮಾಡಿ ನಿಂತಿದ್ದಾನೆ . ಕಣ್ಣ ಮುಂದೆ ನೀರು ಹರಿದಂತೆ ಅವನ ಕಣ್ಣಿನಿಂದ ನೀರು ಹರಿಯುತ್ತದೆ. ನ್ಯಾಯಕ್ಕಾಗಿ ಕೈಚಾಚುತ್ತಿಲ್ಲ ಒಕ್ಕೊರಲಿನಿಂದ ಕೈಮುಗಿಯುತ್ತಿದ್ದೇವೆ ದಯಮಾಡಿ ಅನ್ನದಾತನಿಗೆ ನ್ಯಾಯ ಒದಗಿಸಿ’ ಎಂದು ಪೋಸ್ಟ್​ ಮಾಡಿದ್ದಾರೆ.

ಕನ್ನಡಿಗರಿಗೆ ಮೊದಲು ನೀರಿನ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಅದಕ್ಕಾಗಿ ಹೋರಾಟಕ್ಕೂ ಸಿದ್ದ ಎಂದು ಹೇಳಿದಾರೆ.

RELATED ARTICLES

Related Articles

TRENDING ARTICLES