ಬೆಂಗಳೂರು : ಸನಾತನ ಧರ್ಮದ ಬಗ್ಗೆ ಲಘುವಾಗೆ ಹೇಳಿಕೆ ಹರಿಬಿಟ್ಟು ದೇಶಾದ್ಯಂತ ಹಿಂದೂಗಳ ಆಕ್ರೋಶಕ್ಕೆ ತುತ್ತಾಗಿರುವ ತಮಿಳನಾಡು ಸಚಿವ ಉದಯನಿಧಿ ಸ್ಟಾಲಿನ್ ಇದೀಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ರಾಜಕೀಯ ಕೀಳ ಹೇಳಿಕೆಗೆ ಭಾರಿ ಆಕ್ರೋಶ ವ್ಯಕ್ತವಾಗಿದೆ. ನೂತನ ಸಂಸತ್ ಭವನ ಉದ್ಘಾಟನೆಗೆ ಬಿಜೆಪಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸಿಲ್ಲ. ಇದಕ್ಕೆ ಮುಖ್ಯ ಕಾರಣ ದ್ರೌಪದಿ ಮುರ್ಮು ವಿಧವೆ, ಇಷ್ಟೇ ಅಲ್ಲ ಆದಿವಾಸಿ ಮಹಿಳೆ ಎಂದು ಉದಯನಿಧಿ ಸ್ಟಾಲಿನ್ ಹೇಳಿದ್ದಾರೆ.
ಕೇಂದ್ರ ಸರ್ಕಾರ ನೂತನ ಸಂಸತ್ ಭವನ ಉದ್ಘಾಟನೆಗೆ ತಮಿಳುನಾಡಿನ ಅಧೀನಂ ಸ್ವಾಮಿಜಿಗಳನ್ನು ಕರೆಸಿದ್ದಾರೆ. ಆದರೆ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಆಹ್ವಾನ ನೀಡಿಲ್ಲ. ದ್ರೌಪದಿ ಮುರ್ಮು ವಿಧವೆ ಹಾಗೂ ಆದಿವಾಸಿ ಮಹಿಳೆ ಅನ್ನೋ ಕಾರಣಕ್ಕೆ ಈ ಕಾರ್ಯಕ್ರಮಕ್ಕೆ ಕರೆಸಿಲ್ಲ. ಇದು ಸನಾತನ ಧರ್ಮವೇ? ಎಂದು ಉದಯನಿಧಿ ಸ್ಟಾಲಿನ್ ಪ್ರಶ್ನಿಸಿದ್ದಾರೆ. ಈ ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿದೆ.