Thursday, January 2, 2025

ರಾಜ್ಯಸಭೆಯಲ್ಲೂ ಮಹಿಳಾ ಮೀಸಲಾತಿ ಬಿಲ್ ಅಂಗೀಕಾರ

ನವದೆಹಲಿ : ಲೋಕಸಭೆಯಲ್ಲಿ ನಿನ್ನೆ ಅಂಗೀಕಾರವಾಗಿದ್ದ ಐತಿಹಾಸಿಕ ಮಹಿಳಾ ಮೀಸಲಾತಿ ಬಿಲ್ ಇಂದು ರಾಜ್ಯಸಭೆಯಲ್ಲೂ ಸರ್ವಾನುಮತದಿಂದ ಅಂಗೀಕಾರವಾಗಿದೆ.

ಸಂಸತ್ತು ಹಾಗೂ ವಿಧಾನಸಭೆಗಳಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ಸಿದ್ಧಪಡಿಸಲಾಗಿದ್ದ, ಐತಿಹಾಸಿಕ ‘ನಾರಿ ಶಕ್ತಿ ವಂದನಾ ಅಧಿನಿಯಮ 2023’(ಮಹಿಳಾ ಮೀಸಲಾತಿ ಮಸೂದೆ)ಯು ರಾಜ್ಯಸಭೆಯಲ್ಲಿ ಅಂಗೀಕಾರವಾಗಿದೆ.

ಮಹಿಳಾ ಮೀಸಲಾತಿ ವಿಧೇಯಕದ ಮೇಲೆ ಚರ್ಚೆ ಅಂತ್ಯವಾದ ಬಳಿಕ ರಾಜ್ಯಸಭೆಯಲ್ಲಿ ಮತದಾನ ಪ್ರಕ್ರಿಯೆ ಆರಂಭವಾಯಿತು. ಎಲ್ಲ ಸದಸ್ಯರ ಆಸನಗಳ ಮೇಲೆ ಮಲ್ಟಿ ಮೀಡಿಯಾ ಸಾಧನಗಳನ್ನು ಅಳವಡಿಸಲಾಗಿದ್ದು, ಈ ಮೂಲಕ ಎಲ್ಲ ರಾಜ್ಯಸಭಾ ಸಂಸದರು ತಮ್ಮ ಮತಗಳನ್ನು ಚಲಾಯಿಸಿದರು. 215 ಸಂಸದರು ಮಸೂದೆ ಪರವಾಗಿ ಮತ ಚಲಾಯಿಸಿದ್ದಾರೆ.

ಲೋಕಸಭೆ, ವಿಧಾನಸಭೆಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿಯನ್ನು ಕಲ್ಪಿಸುವ ಮಸೂದೆ ಇದಾಗಿದೆ. ಪ್ರಸ್ತುತ ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಮಹಿಳಾ ಮೀಸಲಾತಿಯು ಶೇ.14ರಷ್ಟು ಮಾತ್ರ ಇವೆ.

RELATED ARTICLES

Related Articles

TRENDING ARTICLES