Wednesday, January 22, 2025

ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸುಪ್ರೀಂ ಆದೇಶ!

ನವದೆಹಲಿ: ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಸುಪ್ರಿಂ ಕೋರ್ಟ್​ ಮತ್ತೊಮ್ಮೆ ಶಾಕ್​ ನೀಡಿದ್ದು ನಿತ್ಯ 5 ಸಾವಿರ ಕ್ಯೂಸೆಕ್ಸ್​ ನೀರನ್ನು ತಮಿಳುನಾಡಿಗೆ ಹರಿಸುವಂತೆ ತೀರ್ಪು ನೀಡಿದೆ.

ಕರ್ನಾಟಕ ಮತ್ತು ತಮಿಳುನಾಡನಿಂದ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​  ಮುಂದಿನ 15 ದಿನಗಳವರೆಗೆ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್​ ನೀರನ್ನು ತಮಿಳುನಾಡಿಗೆ ಹರಿಸುವಂತೆ ನ್ಯಾಯಮೂರ್ತಿ ಬಿ.ಆರ್ ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ಆದೇಶಿಸಿದೆ.

ಇದನ್ನೂ ಓದಿ: ನಟರ ‘ಕಾವೇರಿ’ ಆಕ್ರೋಶ ಜಾಲತಾಣಕ್ಕಷ್ಟೇ ಸೀಮಿತನಾ?

ಇಂದು ಬೆಳಗ್ಗೆ 10.30ಕ್ಕೆ ವಿಚಾರಣೆ ಆರಂಭಿಸಿದ ಪೀಠದ ಮುಂದೆ  ತಮಿಳುನಾಡು ಪರ ವಕೀಲರಾದ ಮುಕುಲ್​ ರೋಹಟಗಿ ಮತ್ತು ಕರ್ನಾಟಕದ ಪರ ವಕೀಲ ಶ್ಯಾಮ್​ ದಿವಾನ್​ ತಮ್ಮ ತಮ್ಮ ವಾದವನ್ನು ಮಂಡಿಸಿದೆ.

ಪ್ರಸ್ತುತ ನೀರಿನ ಸಂಕಷ್ಟ ಇದೆ ಅನ್ನೋದು ಎಲ್ಲರಿಗೂ ಗೊತ್ತಿದೆ. ಆದರೆ, ಸಂಕಷ್ಟ ಸೂತ್ರವನ್ನು ಕರ್ನಾಟಕ ಪಾಲಿಸುತ್ತಿಲ್ಲ. ನಾವು ಬಹಳಷ್ಟು ಕಡಿಮೆ ನೀರನ್ನು ಪಡೆಯುತ್ತಿದ್ದೇವೆ ಎಂದು ತಮಿಳುನಾಡು ಪರ ವಕೀಲ ಮುಕುಲ್​ ರೋಹಟಗಿ ವಾದ ಮಂಡನೆ ಮಾಡಿದರು.

ಕರ್ನಾಟಕ ಪರ ವಾದ ಮಂಡಿಸಿದ ಶ್ಯಾಮ್​ ದಿವಾನ್​, ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ಆದೇಶವನ್ನು ನಾವು ಪಾಲಿಸಿದ್ದೇವೆ ಎಂದರು. ವಾದ-ವಿವಾದಗಳನ್ನು ಆಲಿಸಿದ ಬಳಿಕ ಬಿ.ಆರ್ ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ತಮಿಳುನಾಡಿಗೆ ನೀರು ಹರಿಸಲು ಆದೇಶ ಹೊರಡಿಸಿತು.

RELATED ARTICLES

Related Articles

TRENDING ARTICLES