Friday, July 19, 2024

ಸರಳ ದಸರಾ ಆಚರಣೆಗೆ ರಾಜ್ಯ ಸರ್ಕಾರ ನಿರ್ಧಾರ

ಮೈಸೂರು : ಈ ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ-2023 ಅನ್ನು ಸರಳವಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.

ಈ ಕುರಿತು xನಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್​.ಸಿ ಮಹದೇವಪ್ಪ ಮಾಹಿತಿ ನೀಡಿದ್ದಾರೆ.

ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವುದರಿಂದ ರೈತಾಪಿ ವರ್ಗವು ಸಂಕಷ್ಟದಲ್ಲಿದ್ದು ಈ ಬಾರಿ ಸರಳ ಮತ್ತು ಅರ್ಥಪೂರ್ಣ ದಸರಾ ಆಚರಿಸಿಲು ನಮ್ಮ ಸರ್ಕಾರ ನಿರ್ಧರಿಸಿದೆ. ರೈತರ ಸಂಕಷ್ಟದ ಸಂದರ್ಭಕ್ಕೆ ಪೂರಕವಾಗಿ ಸರ್ಕಾರವು ಈ ಬಾರಿ ಸರಳ ದಸರಾವನ್ನು ಆಚರಿಸಲು ನಿರ್ಧರಿಸಿದೆ ಎಂದು ಪೋಸ್ಟ್​ ಮಾಡಿದ್ದಾರೆ.

RELATED ARTICLES

Related Articles

TRENDING ARTICLES