Wednesday, January 22, 2025

ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಹೂ ಮಾರುತ್ತಿದ್ದ ಯುವಕ

ರಾಮನಗರ : ಪುಟ್​ಬಾತ್​ನಲ್ಲಿ ಹೂವಿನ ವ್ಯಾಪಾರ ಮಾಡುತ್ತಿದ್ದ ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕಿನ ದೊಡ್ಡಾಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ರವಿಚಂದ್ರ (35) ಆತ್ಮಹತ್ಯೆಗೆ ಶರಣಾದ ಯುವಕ. ವ್ಯಾಪರದ ವಿಚಾರವಾಗಿ ಬಾಡಿಗೆ ಅಂಗಡಿಯವರಿಗೂ ಹಾಗೂ ಮೃತ ಯುವಕನ ನಡುವೆ ಗಲಾಟೆ ನಡೆದಿತ್ತು. ಘಟನೆಯಿಂದ ಮನನೊಂದು ಇಂದು ಬೆಳಗ್ಗೆ ವಿಷ ಸೇವಿಸಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ಈ ಸಂಬಂಧ ಸಾತನೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೂ ಕುಟುಂಬಸ್ಥರು ರಸ್ತೆಯಲ್ಲಿ ಮೃತ ಯುವಕನ ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಟೈರ್​ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

RELATED ARTICLES

Related Articles

TRENDING ARTICLES