Monday, December 23, 2024

NDA ಕುಟುಂಬಕ್ಕೆ JDS ಅನ್ನು ಆತ್ಮೀಯವಾಗಿ ಸ್ವಾಗತಿಸುತ್ತೇನೆ : ಅಮಿತ್ ಶಾ

ನವದೆಹಲಿ : ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಈಗ ಅಧಿಕೃತವಾಗಿದೆ. ಇದಕ್ಕೆ ಕೇಂದ್ರ ಗೃಹ ಸಚಿವ ಅಮಿತ್​ ಶಾ ಇಂದು ಮುದ್ರೆ ಒತ್ತಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಅವರು ಅಮಿತ್​ ಶಾ ನಿವಾಸಕ್ಕೆ ತೆರಳಿ ಮೈತ್ರಿ ಬಗ್ಗೆ ಅಮಿತ್ ಶಾ, ಜೆ.ಪಿ ನಡ್ಡಾ ಜೊತೆ ಮಾತುಕತೆ ನಡೆಸಿದ್ದಾರೆ. ಆ ಮೂಲಕ JDS ಅಧಿಕೃತವಾಗಿ ಎನ್​ಡಿಎ ಕೂಟ ಸೇರ್ಪಡೆಯಾಗಿದೆ.

ಈ ಕುರಿತು ಅಮಿತ್​ ಶಾ xನಲ್ಲಿ ಪೋಸ್ಟ್​ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಮುಖಂಡ ಹೆಚ್.ಡಿ. ಕುಮಾರಸ್ವಾಮಿಯವರು ಇಂದು ತಮ್ಮ ಜೊತೆ ಚರ್ಚೆ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಮೇಲೆ ತಮ್ಮ ವಿಶ್ವಾಸವನ್ನು ವ್ಯಕ್ತಪಡಿಸುತ್ತಿದ್ದಾರೆ. ಜೆಡಿಎಸ್,​ ಎನ್‌ಡಿಎ ಭಾಗವಾಗಲು ನಿರ್ಧರಿಸಿದೆ. ಎನ್‌ಡಿಎ ಕುಟುಂಬಕ್ಕೆ ಜೆಡಿಎಸ್ ಅನ್ನು ಆತ್ಮೀಯವಾಗಿ ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ.

ಜೆಡಿಎಸ್ ಪಕ್ಷವು ಕರ್ನಾಟಕವನ್ನು ಅಭಿವೃದ್ಧಿಯ ಪಥದಲ್ಲಿ ಕೊಂಡೊಯ್ಯಲು ಸಹಕರಿಸಲಿದೆ. ಬಲಿಷ್ಠ ಎನ್​ಡಿಎ ಮತ್ತು ಬಲಿಷ್ಠ ಭಾರತಕ್ಕೆ ದಾರಿ ಮಾಡಿಕೊಡುತ್ತದೆ ಎಂದು ಅಮಿತ್​ ಶಾ ಅಭಿಪ್ರಾಯಪಟ್ಟಿದ್ದಾರೆ.

RELATED ARTICLES

Related Articles

TRENDING ARTICLES