ಬೆಂಗಳೂರು : ಭಾರತ ಏಕದಿನ ವಿಶ್ವಕಪ್ಗೂ ಮುನ್ನ ಅಂತಿಮ ಸರಣಿಯನ್ನು ಆಸ್ಟ್ರೇಲಿಯಾ ವಿರುದ್ಧ ಆಡಲಿದೆ. ಇಂದಿನಿಂದ ಈ ಸರಣಿ ಆರಂಭವಾಗಲಿದ್ದು, ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿದೆ.
ಐಸಿಸಿ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಂದು ಪ್ರಾರಂಭವಾಗುವ ಮೊದಲು ಎರಡೂ ತಂಡಗಳಿಗೆ ಈ ಸರಣಿಯು ಅಂತಿಮ ತಯಾರಿಯಾಗಿದೆ. ಮೊದಲ ಎರಡು ಏಕದಿನ ಪಂದ್ಯದಿಂದ ಕೆಲ ಹಿರಿಯ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದ್ದು, ಕನ್ನಡಿಗ ಕೆ.ಎಲ್ ರಾಹುಲ್ ತಂಡವನ್ನು ಮುನ್ನಡೆಸಲಿದ್ದಾರೆ.
ಆಸಿಸ್ಗೆ ಬಿಗ್ ಶಾಕ್
ಇಂದಿನ ಪಂದ್ಯಕ್ಕೂ ಮೊದಲೇ ಆಸಿಸ್ಗೆ ಬಿಗ್ ಶಾಕ್ ಎದುರಾಗಿದೆ. ತಂಡದ ಪ್ರಮುಖ ಆಟಗಾರರಾದ ಗ್ಲೆನ್ ಮ್ಯಾಕ್ಸ್ವೆಲ್ ಹಾಗೂ ವೇಗಿ ಮಿಚೆಲ್ ಸ್ಟಾರ್ಕ್ ಮೊದಲ ಏಕದಿನ ಪಂದ್ಯಕ್ಕೆ ಗೈರು ಹಾಜರಾಗಲಿದ್ದಾರೆ ಎಂದು ನಾಯಕ ಪ್ಯಾಟ್ ಕಮ್ಮಿನ್ಸ್ ಹೇಳಿದ್ದಾರೆ. ಸ್ಟಾರ್ಕ್ ಸೊಂಟ ನೋವಿನಿಂದ ಬಳಲುತ್ತಿದ್ದಾರೆ. ಮ್ಯಾಕ್ಸ್ವೆಲ್ ಪಾದದ ಗಾಯದಿಂದ ಬಳಲುತ್ತಿದ್ದಾರೆ.
ಮಧ್ಯಾಹ್ನ 1 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದ್ದು, 1.30ಕ್ಕೆ ಪಂದ್ಯ ಶುರುವಾಗಲಿದೆ. ಸ್ಪೋರ್ಟ್ಸ್ 18 ಇಂಗ್ಲಿಷ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಪಂದ್ಯವನ್ನು JioCinema ದಲ್ಲಿ ಉಚಿತವಾಗಿ ವೀಕ್ಷಿಸಬಹುದು.
ಭಾರತ ತಂಡ
ಕೆ.ಎಲ್ ರಾಹುಲ್ (ನಾಯಕ), ರವೀಂದ್ರ ಜಡೇಜಾ (ಉಪನಾಯಕ), ಶುಭ್ಮನ್ ಗಿಲ್, ಋತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಮೊಹಮ್ಮದ್ ಶಮಿ, ತಿಲಕ್ ವರ್ಮಾ, ಪ್ರಸಿದ್ಧ್ ಕೃಷ್ಣ, ರವಿಚಂದ್ರನ್ ಅಶ್ವಿನ್, ವಾಷಿಂಗ್ಟನ್ ಸುಂದರ್
ಆಸ್ಟ್ರೇಲಿಯಾ ತಂಡ
ಪ್ಯಾಟ್ ಕಮ್ಮಿನ್ಸ್(ನಾಯಕ), ಸ್ಟೀವ್ ಸ್ಮಿತ್, ಡೇವಿಡ್ ವಾರ್ನರ್, ಅಲೆಕ್ಸ್ ಕ್ಯಾರಿ, ಮಾರ್ನಸ್ ಲಾಬುಶೇನ್, ಸೀನ್ ಅಬಾಟ್, ನಾಥನ್ ಎಲ್ಲಿಸ್, ಕ್ಯಾಮರೋನ್ ಗ್ರೀನ್, ಜೋಶ್ ಹ್ಯಾಜಲ್ವುಡ್, ಜೋಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಮಿಚೆಲ್ ಮಾರ್ಷ್, ಗ್ಲೆನ್ ಮ್ಯಾಕ್ಸ್ವೆಲ್, ತನ್ವೀರ್ ಸಾಂಘಾ, ಮ್ಯಾಟ್ ಶಾರ್ಟ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಆ್ಯಡಮ್ ಜಂಪಾ