Monday, December 23, 2024

ಜೆಡಿಎಸ್-ಬಿಜೆಪಿ ಮೈತ್ರಿ ಅಧಿಕೃತ : ಶಾ ಭೇಟಿ ಬಳಿಕ HDK ಹೇಳಿದ್ದೇನು?

ನವದೆಹಲಿ : ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಇದಕ್ಕೆ ಕೇಂದ್ರ ಗೃಹ ಸಚಿವ ಅಮಿತ್​ ಶಾ ಒಪ್ಪಿಗೆ ಸೂಚಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಅವರು ದೆಹಲಿಯಲ್ಲಿ ಇಂದು ಅಮಿತ್​ ಶಾ ನಿವಾಸಕ್ಕೆ ತೆರಳಿ ಮೈತ್ರಿ ಬಗ್ಗೆ ಅಮಿತ್ ಶಾ, ಜೆ.ಪಿ ನಡ್ಡಾ ಹಾಗೂ ಗೋವ ಸಿಎಂ ಜೊತೆ ಮಾತುಕತೆ ನಡೆಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಹೆಚ್​.ಡಿ ಕುಮಾರಸ್ವಾಮಿ ಅವರು, ಮೈತ್ರಿ ಬಗ್ಗೆ ಅನೇಕ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದು ಹೇಳಿದ್ದಾರೆ. ಈ ವೇಳೆ ನಿಖಿಲ್ ಕುಮಾರಸ್ವಾಮಿ ಅವರು ಹೆಚ್​ಡಿಕೆಗೆ ಸಾಥ್​ ನೀಡಿದರು.

ಮೈತ್ರಿ ಬಗ್ಗೆ ಹೆಚ್​.ಡಿ ದೇವೇಗೌಡ ಅವರು ಮಾತನಾಡಿ, ಮೈತ್ರಿ ವಿಚಾರದಲ್ಲಿ ನಾನು ಏನನ್ನೂ ಮಾತಾಡೋಲ್ಲ. ನಾನು ಮೊದಲೇ ಹೇಳಿದ್ದೆ. ಮೈತ್ರಿ ವಿಚಾರದ ಬಗ್ಗೆ ನಾನು ಯಾವುದೇ ರಿಯಾಕ್ಷನ್ ಕೊಡೋಲ್ಲ. ಆ ಬಗ್ಗೆ ಮಾತಾಡೋಕೆ ಕುಮಾರಸ್ವಾಮಿ ಇದ್ದಾರೆ. ಕುಮಾರಸ್ವಾಮಿ ಈ ಬಗ್ಗೆ ಎಲ್ಲಾ ತೀರ್ಮಾನ ಮಾಡ್ತಾರೆ ಎಂದು ತಿಳಿಸಿದ್ದಾರೆ.

ನನ್ನ ಬಾಯಲ್ಲಿ ಏನೇನು ಹೇಳಿಸಬೇಡಿ

ಕುಮಾರಸ್ವಾಮಿ ಹೋರಾಟ ಮಾಡ್ತಾ ಇರೋದು. ನನಗೆ ಈ ವಿಚಾರ ಮಾತಾಡೋ ಮನಸ್ಸಿಲ್ಲ. ರಾಜ್ಯಸಭೆಯಲ್ಲಿ ಕಾವೇರಿ ವಿಚಾರದಲ್ಲಿ ನಾನೊಬ್ಬನೆ ಮಾತನಾಡಿದೆ ಎಂದರು. ಮಲ್ಲಿಕಾರ್ಜುನ ಖರ್ಗೆ ಮಾತನಾಡಲಿಲ್ಲ ಎಂಬ ಪ್ರಶ್ನೆಗೆ, ಈ ಬಗ್ಗೆ ನನ್ನ ಬಾಯಲ್ಲಿ ಏನೇನು ಹೇಳಿಸಬೇಡಿ. ಅವರೊಬ್ಬರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಎಂದಿದ್ದಾರೆ.

RELATED ARTICLES

Related Articles

TRENDING ARTICLES