ನವದೆಹಲಿ : ಜಿ-20 ಶೃಂಗಸಭೆ ಯಶಸ್ವಿಯಾಗುವಲ್ಲಿ ಪ್ರಮುಖವಾದ ಪಾತ್ರ ನಿರ್ವಹಿಸಿದ್ದ ಜಿ-20 ಟೀಂ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಇಂದು ಭಾರತ್ ಮಂಟಪದಲ್ಲಿ ಸಂವಾದ ನಡೆಸಲಿದ್ದಾರೆ.
ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ. ಸಂವಾದದ ನಂತರ ಭೋಜನ ಸವಿಯಲಿದ್ದಾರೆ ಎಂದು ಪಿಎಂ ಕಚೇರಿ ಮಾಹಿತಿ ನೀಡಿದೆ. ಸಂವಾದದಲ್ಲಿ ವಿವಿಧ ಇಲಾಖೆಗಳ ಸಚಿವರು ಮತ್ತು ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಜಿ-20 ಶೃಂಗಸಭೆಯ ಯಶಸ್ಸಿಗೆ ಕೊಡುಗೆ ನೀಡಿದ ಸುಮಾರು 3,000 ಜನರು ಸಂವಾದದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ. ಇದು ವಿಶೇಷವಾಗಿ ಶೃಂಗಸಭೆಯನ್ನು ಸುಗಮವಾಗಿ ನಡೆಸಲು ನೆಲಮಟ್ಟದಲ್ಲಿ ಕೆಲಸ ಮಾಡಿದವರನ್ನು ಒಳಗೊಂಡಿರುತ್ತದೆ. ಇವರಲ್ಲಿ ಕ್ಲೀನರ್‌ಗಳು, ಚಾಲಕರು, ವೇಟರ್‌ಗಳು ಮತ್ತು ವಿವಿಧ ಸಚಿವಾಲಯಗಳ ಇತರ ಸಿಬ್ಬಂದಿಗಳು ಸೇರಿದ್ದಾರೆ.