Thursday, January 23, 2025

ಕಾವೇರಿ ನೀರು ವಿವಾದ: ಮಂಗಳವಾರ ಬೆಂಗಳೂರು ಬಂದ್​ ಗೆ ಕರೆ!

ಬೆಂಗಳೂರು : ಕಾವೇರಿ ನೀರಿನ ವಿಚಾರವಾಗಿ ಮಂಗಳವಾರ ಬೆಂಗಳೂರು ಬಂದ್​ ಮಾಡಲು ತೀರ್ಮಾನಿಸಲಾಗಿದೆ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್​ ತಿಳಿಸಿದ್ದಾರೆ.

ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಕಾವೇರಿ ಹೋರಾಟದ ನಡುವೆ ಮಾತನಾಡಿದ ಅವರು, ರಾಜ್ಯದಲ್ಲಿ ಬರದ ನಡುವೆಯೂ ನಿತ್ಯ 5 ಸಾವಿರ ಕ್ಯೂಸೆಕ್ಸ್​ ನೀರನ್ನು ತಮಿಳುನಾಡಿಗೆ ಹರಿಸಬೇಕೆಂಬ ಕಾವೇರಿ ನೀರು ನಿರ್ವಹಣ ಪ್ರಾಧಿಕಾರದ ಸೂಚನೆಯನ್ನು ಎತ್ತಿ ಹಿಡಿದಿರುವ ಸುಪ್ರಿಂ ಕೋರ್ಟ್​ ತೀರ್ಪನ್ನು ವಿರೋಧಿಸಿ ರಾಜ್ಯದ ಹಲವೆಡೆ ಪ್ರತಿಭಟನೆ ನಡೆಯುತ್ತಿದೆ.

ಇದನ್ನೂ ಓದಿ: ಕಾವೇರಿ ವಿವಾದ: ಬಿಎಸ್​ ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಭಟನೆ!

ಇದೇ ವೇಳೆ ಸೆಪ್ಟೆಂಬರ್​ 26 ರಂದು ಬೆಂಗಳೂರು ಬಂದ್ ಮಾಡಲು ತೀರ್ಮಾನಿಸಲಾಗಿದೆ. ಮಂಗಳವಾರ ನಡೆಯಲಿರುವ ಬಂದ್​ ಗೆ ಬೆಂಗಳೂರಿನ ಐಟಿ ಕಂಪೆನಿಗಳು ಬೆಂಬಲ ನೀಡುವಂತೆ ಮನವಿ ಮಾಡಿಕೊಳ್ಳಲಾಗಿದೆ.

ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸದಂತೆ ಸರ್ಕಾರದ ವಿರುದ್ದ ಮಂಗಳವಾರ ಟೌನ್​ ಹಾಲ್‌ನಿಂದ ಬೃಹತ್​ ರ್ಯಾಲಿ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಅವರು ಹೇಳಿದರು.

RELATED ARTICLES

Related Articles

TRENDING ARTICLES