ಬೆಂಗಳೂರು : ವಿಧಾನಸಭಾ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಯೊಬ್ಬರಿಂದ ಕೋಟ್ಯಾಂತರ ರೂ ವಂಚನೆ ನಡೆಸಿರುವ ಚೈತ್ರ ಕುಂದಾಪುರ ಪಕ್ರರಣದಲ್ಲಿ ಚೈತ್ರ ಹೆಸರಿನ ಜೊತೆಗೆ ‘ಕುಂದಾಪುರ’ ಹೆಸರನ್ನು ಬಳಸದಂತೆ ವ್ಯಕ್ತಿಯೊಬ್ಬರು ಕೋರ್ಟ್ ಮೊರೆಹೋಗಿದ್ದಾರೆ.
ಇದನ್ನೂ ಓದಿ : ಉದಯನಿಧಿ ಸ್ಟಾಲಿನ್‌ಗೆ ಸುಪ್ರೀಂ ನೋಟಿಸ್!
ಹಿಂದು ಪರ ಸಂಘಟನೆಯ ಚೈತ್ರ ಕುಂದಾಪುರ ಅವರ ಸುದ್ದಿಯನ್ನು ಪ್ರಸಾರ ಮಾರುವಾಗ ಚೈತ್ರ ಹೆಸರಿನ ಜೊತೆಗೆ ಕುಂದಾಪುರ ಹೆಸರನ್ನು ಬಳಸದಂತೆ ಮಾದ್ಯಮಗಳಿಗೆ ನಿರ್ಬಂಧ ಹೇರುವಂತೆ ಕೋರಿ ನಗರದ ಸಿಟಿ ಸಿವಿಲ್ ಕೋರ್ಟ್ಗೆ ಕುಂದಾಪುರ ಮೂಲದ ಉದ್ಯಮಿ ಗಣೇಶ್ ದಾವೇ ಹೂಡಿದ್ದಾರೆ.
ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರ ಮತ್ತು ತಂಡದ ವಿಚಾರಣೆಯನ್ನು ಸಿಸಿಬಿ ಪೊಲೀಸರು ನಡೆಸುತ್ತಿದ್ದು ಈ ನಡುವೆ ಚೈತ್ರ ಪ್ರಕರಣದಲ್ಲಿ ಕುಂದಾಪುರ ಹೆಸರನ್ನು ಪದೇ ಪದೇ ಬಳಸುತ್ತಿರುವುದರಿಂದ ಇಲ್ಲಿನ ಸ್ಥಳೀಯರ ಭಾವನೆಗೆ ದಕ್ಕೆಯಾಗುತ್ತಿರುವುದರಿಂದ ಮಾದ್ಯಮಗಳಿಗೆ ಕುಂದಾಪುರ ಹೆಸರನ್ನು ಬಳಸದಂತೆ ನಿರ್ಬಂಧ ನೀಡುವಂತೆ ಕೋರ್ಟ್ ಮೊರೆ ಹೋಗಿದ್ದಾರೆ.