Saturday, May 18, 2024

ಚೈತ್ರ ವಂಚನೆ ಪ್ರಕರಣ: ಕುಂದಾಪುರ ಹೆಸರು ಬಳಸದಂತೆ ಕೋರ್ಟ್​​ ಮೊರೆ!

ಬೆಂಗಳೂರು : ವಿಧಾನಸಭಾ ಚುನಾವಣೆಗೆ ಟಿಕೆಟ್​ ಕೊಡಿಸುವುದಾಗಿ ಹೇಳಿ ಉದ್ಯಮಿಯೊಬ್ಬರಿಂದ ಕೋಟ್ಯಾಂತರ ರೂ ವಂಚನೆ ನಡೆಸಿರುವ ಚೈತ್ರ ಕುಂದಾಪುರ ಪಕ್ರರಣದಲ್ಲಿ ಚೈತ್ರ ಹೆಸರಿನ ಜೊತೆಗೆ ‘ಕುಂದಾಪುರ’ ಹೆಸರನ್ನು ಬಳಸದಂತೆ ವ್ಯಕ್ತಿಯೊಬ್ಬರು ಕೋರ್ಟ್​ ಮೊರೆಹೋಗಿದ್ದಾರೆ.

ಇದನ್ನೂ ಓದಿ : ಉದಯನಿಧಿ ಸ್ಟಾಲಿನ್‌ಗೆ ಸುಪ್ರೀಂ​​​​​ ನೋಟಿಸ್​​!

ಹಿಂದು ಪರ ಸಂಘಟನೆಯ ಚೈತ್ರ ಕುಂದಾಪುರ ಅವರ ಸುದ್ದಿಯನ್ನು ಪ್ರಸಾರ ಮಾರುವಾಗ ಚೈತ್ರ ಹೆಸರಿನ ಜೊತೆಗೆ ಕುಂದಾಪುರ ಹೆಸರನ್ನು ಬಳಸದಂತೆ ಮಾದ್ಯಮಗಳಿಗೆ ನಿರ್ಬಂಧ ಹೇರುವಂತೆ ಕೋರಿ ನಗರದ ಸಿಟಿ ಸಿವಿಲ್​ ಕೋರ್ಟ್​ಗೆ ಕುಂದಾಪುರ ಮೂಲದ ಉದ್ಯಮಿ ಗಣೇಶ್​ ದಾವೇ ಹೂಡಿದ್ದಾರೆ.

ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರ ಮತ್ತು ತಂಡದ ವಿಚಾರಣೆಯನ್ನು ಸಿಸಿಬಿ ಪೊಲೀಸರು ನಡೆಸುತ್ತಿದ್ದು ಈ ನಡುವೆ ಚೈತ್ರ ಪ್ರಕರಣದಲ್ಲಿ ಕುಂದಾಪುರ ಹೆಸರನ್ನು ಪದೇ ಪದೇ ಬಳಸುತ್ತಿರುವುದರಿಂದ ಇಲ್ಲಿನ ಸ್ಥಳೀಯರ ಭಾವನೆಗೆ ದಕ್ಕೆಯಾಗುತ್ತಿರುವುದರಿಂದ ಮಾದ್ಯಮಗಳಿಗೆ ಕುಂದಾಪುರ ಹೆಸರನ್ನು ಬಳಸದಂತೆ ನಿರ್ಬಂಧ ನೀಡುವಂತೆ ಕೋರ್ಟ್​ ಮೊರೆ ಹೋಗಿದ್ದಾರೆ.

RELATED ARTICLES

Related Articles

TRENDING ARTICLES