Wednesday, January 22, 2025

SSLC, ದ್ವಿತೀಯ PUC ವಾರ್ಷಿಕ-3 ಪರೀಕ್ಷೆಯ ಮಾರ್ಗಸೂಚಿ ಪ್ರಕಟ

ಬೆಂಗಳೂರು : SSLC ಹಾಗೂ ದ್ವೀತಿಯ PUC ವಾರ್ಷಿಕ ಮೂರನೇ ಪರೀಕ್ಷೇಯ ಮಾರ್ಗಸೂಚಿ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಲಿಯಿಂದ ಪ್ರಕಟ. 2023-24ನೇ ಸಾಲಿನಿಂದ ಜಾರಿಗೆ ಬರುವಂತೆ ಕ್ರಮವಹಿಸಲು ಸೂಚನೆ.

SSLC ಹಾಗೂ ದ್ವೀತಿಯ ಪಿಯುಸಿ ವಾರ್ಷಿಕ – 3ನೇ ಪರೀಕ್ಷೆಯನ್ನು ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದಾರೆ. ಈ ಹಿನ್ನೆಲೆ ಮಾರ್ಗಸೂಚಿಯಲ್ಲಿ ಪರೀಕ್ಷೆ ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ತರಗತಿಗಳಲ್ಲಿ ವಾರ್ಷಿಕ ಹಾಜರಾತಿ ಶೇಕಡಾ 75 ರಷ್ಟು ಕಡ್ಡಾಯವಾಗಿ ಇರಬೇಕು. ಒಂದು ವೇಳೆ ಶೇ. 75ಕ್ಕಿಂತ ಕಡಿಮೆ ಹಾಜರಾತಿ ಹೊಂದಿದಲ್ಲಿ ಪರೀಕ್ಷೆ ಬರೆಯಲು ಅರ್ಹರಿರುವುದಿಲ್ಲ ಎಂದು ಮಂಡಲಿಯಿಂದ ತಿಳಿಸಿದ್ದಾರೆ.

ಇದನ್ನು ಓದಿ : ಅರಣ್ಯ ಪ್ರದೇಶದಲ್ಲಿ ಯುವತಿಯ ಶವ ಪತ್ತೆ

ಇನ್ನೂ ಪ್ರಥಮ ಬಾರಿಗೆ ಪರೀಕ್ಷೆ ತೆಗೆದುಕೊಳ್ಳುವ ಹೊಸಬರು ಮತ್ತು ಖಾಸಗಿ ಅಭ್ಯರ್ಥಿಗಳು ಎಲ್ಲಾ ವಿಷಯಗಳಲ್ಲೂ ಪರೀಕ್ಷೆ- 1 ಬರೆಯುವುದು ಕಡ್ಡಾಯವಾಗಿರುತ್ತದೆ. ಹಾಗೂ ನೇರವಾಗಿ ಪರೀಕ್ಷೆ – 2 ಮತ್ತು ಪರೀಕ್ಷೆ -3ಕ್ಕೆ ಹಾಜರಾಗುವಂತಿಲ್ಲ. ವಿದ್ಯಾರ್ಥಿಗಳಿಗೆ ಆಂತರಿಕ ಅಂಕಗಳನ್ನು ನೀಡುವ ಸಂಬಂಧ ಜಿಲ್ಲಾ ಉಪನಿರ್ದೇಶಕರು ಅಗತ್ಯ ತಂಡವನ್ನು ರಚಿಸಿಕೊಂಡು ಪ್ರತಿಯೊಂದು ಕಾಲೇಜಿಗೆ ಭೇಟಿ ನೀಡಿ, ಹಾಜರಾದ ವಿದ್ಯಾರ್ಥಿಗಳು ಮತ್ತು ಗೈರು ಹಾಜರಾದವರು ಹಾಗೂ ನೋಂದಣಿ ವಿದ್ಯಾರ್ಥಿಗಳ ಪರಿಶೀಲನೆ ನಡೆಸಬೇಕು.

ಎಸ್ ಎಸ್ ಎಲ್ ಸಿ ಮತ್ತು ದ್ವೀತಿಯ ಪಿಯುಸಿ ಪರೀಕ್ಷೆಗಳಲ್ಲಿ ತೇರ್ಗಡೆಯಾಗುವ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡುವ ಸಲುವಾಗಿ ಒಂದು ಭಾರಿ ಮಾತ್ರ ನಿಗದಿತ ಶುಲ್ಕವನ್ನು ವಿಧಿಸಬೇಕು. ಎರಡನೇ ಬಾರಿ ಶುಲ್ಕವನ್ನು ಪಡೆಯುವಂತಿಲ್ಲ.

ಪರೀಕ್ಷೆ – 1 ರಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ 2 ಮತ್ತು 3 ನೇ ಪರೀಕ್ಷೆ ತೆಗೆದುಕೊಳ್ಳಲು ಇಚ್ಛೆ ಇಲ್ಲದಿದ್ದಲ್ಲಿ ಅವರಿಗೆ ಅಂಕಪಟ್ಟಿಯನ್ನು ವಿತರಿಸಬೇಕು. ಹಾಗೂ ವಿದ್ಯಾರ್ಥಿಗಳ ಅಂಕಗಳನ್ನು ಪಡೆಯುವ ಸಲುವಾಗಿ National academy depository (NAD) ಡಿಜಿ ಲಾಕರ್ ವ್ಯವಸ್ಥೆಯಲ್ಲಿ ಆಯಾ ಪರೀಕ್ಷೆಗಳ ಮುಂದೆ ನಂತರ ಅಪ್ಲೋಡ್ ಮಾಡುವುದು.

ಇನ್ನೂ SSLC ಮತ್ತು ದ್ವತೀಯ PUC ಪರೀಕ್ಷೆಗಳಲ್ಲಿ ಅನುತ್ತೀರ್ಣರಗಿ ಮರು ಪ್ರಯತ್ತಿಸುವ ವಿದ್ಯಾರ್ಥಿಗಳಿಗೆ ಹಾಲಿ ವ್ಯವಸ್ಥೆಯನ್ನು ಮುಂದುವರಿಸುವುದು. ಈ ಹೊಸ ಮಾರ್ಗಸೂಚಿಯು 2023 – 24 ನೇ ಸಾಲಿನಿಂದ ಜಾರಿಗೆ ಬರುವಂತೆ ಕ್ರಮವಹಿಸಲು ಸೂಚನೆಯನ್ನು ನೀಡಲಾಗಿದೆ.

RELATED ARTICLES

Related Articles

TRENDING ARTICLES