ಬೆಂಗಳೂರು : ಹೃದಯ ಸಂಬಂಧಿ ಕಾಯಿಲೆಗಳನ್ನು ತಡೆಗಟ್ಟಲು ಮತ್ತು ನಿಯಂತ್ರಿಸಲು ಆರೋಗ್ಯಕರವಾದ ಜೀವನಶೈಲಿಯನ್ನು ಅಳವಡಿಸಿಕೊಳ್ಳುವಂತೆ ಬೆಂಗಳೂರಿನಲ್ಲಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಸೆಪ್ಟೆಂಬರ್ 29ರ ‘ವಿಶ್ವ ಹೃದಯ ದಿನ’ದ ಅಂಗವಾಗಿ ಕಾವೇರಿ ಆಸ್ಪತ್ರೆ ವತಿಯಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ವಿಪ್ರೋ ಗೇಟ್ನಲ್ಲಿ ಹೃದಯಕ್ಕಾಗಿ ಓಟ ಎಂಬ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಫಿಟ್ ಇಂಡಿಯಾ ರಾಯಭಾರಿ ಶ್ವೇತ ಮೌರ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಇತ್ತೀಚೆಗೆ ಯುವಕರಲ್ಲಿ ಹೃದಯ ಕಾಯಿಲೆಗಳು ಕಾಣಿಸಿಕೊಳ್ಳುತ್ತಿದ್ದು, ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಹಾಗಾಗಿ ಹೃದಯ ಸಂಬಂಧಿ ಕಾಯಿಲೆಯಿಂದ ದೂರವಿರಲು ಮತ್ತು ಫಿಟ್ ಅಂಡ್ ಫೈನ್ ಆಗಿರಬೇಕು ಎನ್ನುವ ನಿಟ್ಟಿನಲ್ಲಿ ವ್ಯಾಯಾಮ, ಸೈಕ್ಲಿಂಗ್, ಮ್ಯಾರಥಾನ್ ಓಟವನ್ನ ಕಾವೇರಿ ಆಸ್ಪತ್ರೆ ಆಯೋಜಿಸುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದರು.
ಜೊತೆಗೆ ವಾಕಥಾನ್ ಹಾಗೂ ಸೈಕ್ಲಿಂಗ್ನಲ್ಲಿ 2,500 ಜನ ವಿವಿಧ ಸಾಫ್ಟ್ವೇರ್ ಕಂಪನಿಯ ಉದ್ಯೋಗಿಗಳು, ಕಾಲೇಜಿ ವಿದ್ಯಾರ್ಥಿಗಳು, ಎಲೆಕ್ಟ್ರಾನಿಕ್ ಸಿಟಿ ಮಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಅಲ್ಲದೆ ಜುಂಬಾ ಡ್ಯಾನ್ಸ್ ಮಾಡಿ ಐಟಿ ಮಂದಿ ಕುಣಿದು ಕುಪ್ಪಳಿಸಿದರು.