ಬೆಂಗಳೂರು: ಉದ್ಯಮಿಗೆ ವಂಚಿಸಿರುವ ಆರೋಪದಲ್ಲಿ ಜೈಲು ಸೇರಿರುವ ಕುಂದಾಪುರದ ಚೈತ್ರಾ ಹೆಸರಿನ ಜತೆಗೆ ‘ಕುಂದಾಪುರ’ ಉಲ್ಲೇಖಿಸಿ ಸುದ್ದಿ ಪ್ರಸಾರ, ಅಭಿಪ್ರಾಯ ವ್ಯಕ್ತಪಡಿಸುವುದನ್ನು, ಚರ್ಚೆ ನಡೆಸುವುದನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿ 22ನೇ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
ಮಾಧ್ಯಮಗಳಲ್ಲಿ ಆರೋಪಿಯನ್ನು ಹೆಸರಿಸುವಾಗ ಚೈತ್ರ ಜೊತೆಗೆ ಕುಂದಾಪುರ ತಾಲೂಕಿನ ಹೆಸರನ್ನು ಉಲ್ಲೇಖಿಸುತ್ತಿರುವುದರಿಂದ ತಾಲೂಕಿನ ಹೆಸರಿಗೆ ಧಕ್ಕೆ ಆಗುತ್ತಿದೆ. ಕುಂದಾಪುರದ ನಿವಾಸಿಗಳಿಗೆ ಅವಮಾನವಾಗುತ್ತಿದೆ. ಹೀಗಾಗಿ ಮಾಧ್ಯಮಗಳು ಕುಂದಾಪುರ ಎಂದು ಉಲ್ಲೇಖಿಸಿರುವ ಸುದ್ದಿ, ವಿಡಿಯೋ, ಲೇಖನ, ಪೋಸ್ಟ್, ಲಿಂಕ್ ಅನ್ನು ಶಾಶ್ವತವಾಗಿ ತೆಗೆದು ಹಾಕುವಂತೆ ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳಿಗೆ ಸೂಚಿಸಬೇಕು.
ಇದನ್ನೂ ಓದಿ: SSLC, PUC ಪರೀಕ್ಷೆಯ ಮಾರ್ಗಸೂಚಿ ಪ್ರಕಟ!
ಬಸವನಗುಡಿಯಲ್ಲಿ ಕಾಫಿ ಶಾಪ್ ನಡೆಸುತ್ತಿರುವ ಮೂಲತಃ ಕುಂದಾಪುರದ ಗಣೇಶ್ ಶೆಟ್ಟಿ ಚೈತ್ರ ಹೆಸರಿನ ಜೊತೆಗೆ ಕುಂದಾಪುರ ಹೆಸರನ್ನು ಸೇರಿಸದಂತೆ ನ್ಯಾಯಾಲಯದ ಮೊರೆ ಹೋಗಿದ್ದರು. ಈ ವಿಚಾರಣೆ ಕೈಗೆತ್ತಿಕೊಂಡ ನ್ಯಾಯಾಲಯ, ಮುಂದಿನ ವಿಚಾರಣೆವರೆಗೆ ಕುಂದಾಪುರದ ಹೆಸರನ್ನು ಬಳಸಿಕೊಂಡು ಚೈತ್ರಾ ಅವರ ಬಗ್ಗೆ ಯಾವುದೇ ಸುದ್ದಿಯ ಪ್ರಸಾರ, ಪ್ರಕಟ, ಚರ್ಚೆ ನಡೆಸದಂತೆ ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿ ಸಮನ್ಸ್ ಜಾರಿಗೊಳಿಸಿದೆ.