Saturday, December 9, 2023
Powertv Logo

Kannada Kannada English English Hindi Hindi Telugu Telugu Tamil Tamil Malayalam Malayalam

Homeಈ ಕ್ಷಣSSLC, PUC ಪರೀಕ್ಷೆಯ ಮಾರ್ಗಸೂಚಿ ಪ್ರಕಟ!

SSLC, PUC ಪರೀಕ್ಷೆಯ ಮಾರ್ಗಸೂಚಿ ಪ್ರಕಟ!

ಬೆಂಗಳೂರು : SSLC, ದ್ವಿತೀಯ PUC ವಾರ್ಷಿಕ-3ರ ಪರೀಕ್ಷೆಯ ಮಾರ್ಗಸೂಚಿ ಪ್ರಕಟಗೊಂಡಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾರ್ಗಸೂಚಿ ಪ್ರಕಟಿಸಿದ್ದು, ಪರೀಕ್ಷೆ ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ತರಗತಿಯಲ್ಲಿ ವಾರ್ಷಿಕ ಹಾಜರಾತಿ ಶೇ.75ರಷ್ಟು ಕಡ್ಡಾಯಗೊಳಿಸಿದೆ.

ಜೊತೆಗೆ ಪರೀಕ್ಷೆ-1ನ್ನು ಬರೆಯದೇ ವಿದ್ಯಾರ್ಥಿಗಳು ಯಾವುದೇ ಕಾರಣಕ್ಕೂ ನೇರವಾಗಿ ಪರೀಕ್ಷೆ-2 ಮತ್ತು ಪರೀಕ್ಷೆ-3ಕ್ಕೆ ಹಾಜರಾಗುವಂತಿಲ್ಲ. ಇನ್ನು, ತೇಗರ್ಡೆಯಾಗುವ ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡುವ ಸಲುವಾಗಿ ಒಂದು ಬಾರಿ ಮಾತ್ರ ಶುಲ್ಕ ವಿಧಿಸಬೇಕು.

ಇದನ್ನೂ ಓದಿ: ಡೆಂಘಿ, ನಿಫಾ ಆಯ್ತು ಈಗ ಇಲಿ ಜ್ವರದ ಸರದಿ : ಲಕ್ಷಣಗಳೇನು, ಹೇಗೆ ಹರಡುತ್ತೆ?

ಜೊತೆಗೆ SSLC ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿ ಮರು ಪ್ರಯತ್ನಿಸುವ ವಿದ್ಯಾರ್ಥಿಗಳಿಗೆ ಹಾಲಿ ವ್ಯವಸ್ಥೆಯನ್ನು ಮುಂದುವರಿಸಬೇಕೆಂದು, ಈ ಹೊಸ ಮಾರ್ಗಸೂಚಿಯ ಮೂಲಕ 2023-24ನೇ ಸಾಲಿನಿಂದ ಜಾರಿಗೆ ಬರುವಂತೆ ಕ್ರಮ ವಹಿಸಲು ಸೂಚಿಸಲಾಗಿದೆ.

LEAVE A REPLY

Please enter your comment!
Please enter your name here

Most Popular

Recent Comments