Sunday, January 19, 2025

ಬಿಜೆಪಿ-ಜೆಡಿಎಸ್ ಸ್ಥಿತಿ ಹೇಳಲು ಹೆಸರಿಲ್ಲದಂತಾಗುತ್ತೆ : ಈಶ್ವರ ಖಂಡ್ರೆ

ಚಿಕ್ಕಮಗಳೂರು : ಬಿಜೆಪಿ ಹಾಗೂ ಜೆಡಿಎಸ್ ಇಬ್ಬರ ಸ್ಥಿತಿ ಹೇಳಲು ಹೆಸರಿಲ್ಲದಂತಾಗುತ್ತೆ, ಅವರಿಬ್ಬರ ಮೈತ್ರಿಯಿಂದ ಕಾಂಗ್ರೆಸ್ಸಿಗೆ ಯಾವುದೇ ನಷ್ಟವಿಲ್ಲ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿ ಹಾಗೂ ಜೆಡಿಎಸ್ ಹೊಟ್ಟೆ ಕಿಚ್ಚಿನಿಂದ ಕೈ ಕೈ ಹಿಸುಕಿಕೊಳ್ತಿದ್ದಾರೆ. ಅವರಿಗೆ ನಮ್ಮ ಅಸ್ತಿತ್ವವೇ ಹೋಗುತ್ತೆ ಎಂದು ಕುಟುಕಿದ್ದಾರೆ.

ಕಾಂಗ್ರೆಸ್ ಮುಂದೆ ನಾವು ಏನು ಇರಲ್ಲ ಅನ್ನಿಸಿದೆ. ಅವರಿಗೆ ಯಾವುದೇ ಕೆಲಸ ಇಲ್ಲದ ಕಾರಣ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಅವರ ಮಾತುಗಳಲ್ಲಿ ಹುರುಳಿಲ್ಲ, ಕಾಂಗ್ರೆಸ್ಸಿಗೆ ಅವರಿಂದ ನಷ್ಟವೂ ಇಲ್ಲ. ಲೋಕಸಭೆಯಲ್ಲಿ 25 ಸ್ಥಾನ ಗೆದ್ದೇ ಗೆಲ್ಲುತ್ತೇವೆ. ಗ್ಯಾರಂಟಿಯಿಂದಲೇ ಕಾಂಗ್ರೆಸ್ ಪೂರ್ಣ ಬಹುಮತದ ಸರ್ಕಾರ ಬಂದಿದೆ. ಕೊಟ್ಟ ಮಾತನ್ನ ಉಳಿಸಿಕೊಂಡು ಪಾರದರ್ಶಕ ಆಡಳಿತ ನೀಡುತ್ತಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರೈತರಿಗೆ ಅನ್ಯಾಯವಾಗದಂತೆ ಕ್ರಮ

ಕಾವೇರಿ ನದಿ ನೀರು ವಿವಾದ ಸಂಬಂಧ ಮಾತನಾಡಿ,ಮರಾಜ್ಯದ ನೆಲ, ಜಲ ಕಾಪಾಡುವುದು ನಮ್ಮಲ್ಲೆರ ಕರ್ತವ್ಯ. ಆ ದೃಷ್ಟಿಯಿಂದ ಕರ್ನಾಟಕ ಸರ್ಕಾರ ಕಾವೇರಿ ನೀರು ಬಳಕೆ ಮಾಡುವುದು. ನಮ್ಮ ರೈತರ ಅನೂಕೂಲಕ್ಕಾಗಿ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.

ಕಾನೂನು ತಜ್ಞರು, ಹಿರಿಯರ ಜೊತೆ ನಿರಂತರ ಚರ್ಚೆ ನಡೆಯುತ್ತಿದೆ. ಸರ್ವ ಪಕ್ಷ ಸಭೆ ಕರೆದು ಕೂಡ ಚರ್ಚೆ ಮಾಡಲಾಗಿದೆ. ಕೇಂದ್ರದ ಗಮನಕ್ಕೆ ತಂದು ಸರ್ವೋಚ್ಚ ನ್ಯಾಯಲಯದಲ್ಲಿ ವಾದ ಮಂಡಿಸಲಿದ್ದೇವೆ. ನಮ್ಮ ರಾಜ್ಯಕ್ಕೆ ಆ ಭಾಗದ ರೈತರು, ಜನರಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

RELATED ARTICLES

Related Articles

TRENDING ARTICLES