Wednesday, January 22, 2025

ಟನ್ ಗಟ್ಟಲೆ ಗೋಮಾಂಸ ಸಾಗಾಣಿಕೆ ! ವಾಹನಕ್ಕೆ ಬೆಂಕಿ ಇಟ್ಟು ಆಕ್ರೋಶ

ದೊಡ್ಡಬಳ್ಳಾಪುರ : ಗೋಮಾಂಸ ಸಾಗಾಣಿಕೆ ಮಾಡುತ್ತಿದ್ದ ವಾಹನಗಳನ್ನು ತಡೆದ ಹಿಂದೂ ಸಂಘಟನೆಗಳ ಕಾರ್ಯಕರ್ತರು ವಾಹನಕ್ಕೆ ಬೆಂಕಿ ಹಚ್ಚಿರುವ ಘಟನೆ ನಗರದ ಟಿಬಿ ಸರ್ಕಲ್ ಸಮೀಪ ಇಂದು ಬೆಳಗ್ಗೆ ನಡೆದಿದೆ.

ಆಂಧ್ರಪ್ರದೇಶದ ಹಿಂದೂಪುರದಿಂದ ಬೆಂಗಳೂರಿಗೆ 6 ವಾಹನಗಳಲ್ಲಿ ಅಕ್ರಮವಾಗಿ ಗೋಮಾಂಸ ಸಾಗಾಣಿಕೆ ಮಾಡುತ್ತಿದ್ದಾಗ ದೊಡ್ಡಬಳ್ಳಾಪುರ ನಗರದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರು ತಡೆದಿದ್ದಾರೆ. ಈ ವೇಳೆ ಹಿಂದು ಪರ ಕಾರ್ಯಕರ್ತರ ಮೇಲೆ ವಾಹನದಲ್ಲಿದ್ದವರು ಹಲ್ಲೆಗೆ ಮುಂದಾಗಿದ್ದಾರೆ ಇದರಿಂದ ಆಕ್ರೋಶಗೊಂಡ ಕಾರ್ಯಕರ್ತರು ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ.

ಇದನ್ನೂ ಓದಿ: ಚೈತ್ರಾ ಹೆಸರು ಜತೆ ‘ಕುಂದಾಪುರ’ ಬಳಸದಂತೆ ಕೋರ್ಟ್‌ ನಿರ್ಬಂಧ

ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದಾವಿಸಿ ಬೆಂಕಿಯನ್ನು ಆರಿಸುವಲ್ಲಿ ಯಶಸ್ವಿಯಾಗಿದ್ದಾರೆ. ವಿಚಾರ ತಿಳಿದು ದೊಡ್ಡಬಳ್ಳಾಪುರ ನಗರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ವಾಹನವನ್ನು ಗೋಮಾಂಸ ತುಂಬಿದ್ದ ವಾಹನವನ್ನು ವಶಕ್ಕೆ ಪಡೆದಿದ್ದಾರೆ.

RELATED ARTICLES

Related Articles

TRENDING ARTICLES