Wednesday, January 22, 2025

ಬಿಬಿಎಂಪಿ ಕಸದ ಲಾರಿಗೆ ಬೈಕ್ ಡಿಕ್ಕಿ; ಓರ್ವ ಸಾವು

ಬೆಂಗಳೂರು : ಬಿಬಿಎಂಪಿ ಕಸದ ಲಾರಿಯ ಹಿಂಬದಿಗೆ ಬೈಕ್ ಡಿಕ್ಕಿ ಹೊಡೆದು ಸವಾರ ಸಾವನ್ನಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಯಶವಂತ್​ ಮೃತ ದುರ್ದೈವಿ, ರಸ್ತೆ ಬದಿಯಲ್ಲಿ ಕಸದ ಲಾರಿಯನ್ನು ಪಾರ್ಕ್ ಮಾಡಲಾಗಿತ್ತು. ಬನಶಂಕರಿ ಮಾರ್ಗದಿಂದ ಸೌತ್ ಎಂಡ್ ಸರ್ಕಲ್ ಕಡೆಗೆ ಯುವಕ ಯಶವಂತ್ ಹೊರಟಿದ್ದ. ರಸ್ತೆ ಖಾಲಿಯಿದ್ದ ಕಾರಣ ಅತಿವೇಗವಾಗಿ ಬೈಕ್​​ನಲ್ಲಿ ಹೋಗುತ್ತಿದ್ದರಿಂದ ನಿಂತಿದ್ದ ಬಿಬಿಎಂಪಿ ಕಸದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾನೆ.

ಇದನ್ನೂ ಓದಿ : ಕಾವೇರಿ ವಿಚಾರ: ನಾವು ಮಾತ್ರ ನಿಮ್ಮ ಕಣ್ಣಿಗೆ ಕಾಣೋದಾ: ಡಿಬಾಸ್​ ದರ್ಶನ್​

ಡಿಕ್ಕಿಯ ರಭಸಕ್ಕೆ ಲಾರಿಯ ಹಿಂಬದಿಯಲ್ಲಿ ಅರ್ಧದಷ್ಟು ಬೈಕ್ ಒಳಗೆ ಸಿಲುಕಿದೆ. ಬೈಕ್ ಸಮೇತ ಹಿಂಬದಿಯೊಳಗೆ ಯಶವಂತ್ ಸಿಲುಕಿದ್ದ ಹಿನ್ನೆಲೆ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ತಡರಾತ್ರಿ 12 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಮೃತದೇಹ ಹೊರ ತೆಗೆಯಲು ನಾಲ್ಕೈದು ಗಂಟೆ ಪೊಲೀಸರು ಹರಸಾಹಸ ಪಟ್ಟಿದ್ದಾರೆ.

RELATED ARTICLES

Related Articles

TRENDING ARTICLES