Monday, December 23, 2024

ಕಾವೇರಿ ವಿಚಾರವಾಗಿ ಬೇಜವಾಬ್ದಾರಿ ಹೇಳಿಕೆ ನೀಡಿದ ನಟ ದರ್ಶನ್​ ವಿರುದ್ದ ಖಂಡನೆ!

ಮಂಡ್ಯ : ಕಾವೇರಿ ವಿಚಾರವಾಗಿ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ನಟ ದರ್ಶನ್​ ವಿರುದ್ದ ರೈತರು ಖಂಡನೆ ವ್ಯಕ್ತಪಡಿಸಿದ್ದಾರೆ.

ನಿತ್ಯ 5 ಸಾವಿರ ಕ್ಯೂಸೆಕ್ಸ್​ ನೀರನ್ನು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂ ಕೋರ್ಟ್​ ನೀಡಿರುವ ತೀರ್ಪನ್ನು ವಿರೋಧಿಸಿ ಮಂಡ್ಯದ ವಿಶ್ವೆಶ್ವರಯ್ಯ ಪ್ರತಿಮೆ ಎದುರು ಮಂಡ್ಯ ಜಿಲ್ಲಾ ಹಿತರಕ್ಷಣಾ ಸಮಿತಿ ವತಿಯಿಂದ ನಡೆಯುತ್ತಿರುವ ಪ್ರತಿಭಟನೆ  ವೇಳೆ ನಟ ದರ್ಶನ್​  ವಿರುದ್ದ ದಿಕ್ಕಾರದ ಕೂಗು ಕೇಳಿಬಂದಿದೆ.

ಇದನ್ನೂ ಓದಿ: ಕಾವೇರಿ ವಿಚಾರ: ನಾವು ಮಾತ್ರ ನಿಮ್ಮ ಕಣ್ಣಿಗೆ ಕಾಣೋದಾ: ಡಿಬಾಸ್​ ದರ್ಶನ್​

ಕನ್ನಡಿಗರಿಂದಲೇ ಚಿತ್ರರಂಗದಲ್ಲಿ ಬೆಳೆದು ಕನ್ನಡ ವಿರೋಧವಾಗಿ ಕಾವೇರಿ ವಿಚಾರವಾಗಿ ಬೇಜವಾಬ್ದಾರಿತನದಿಂದ ಮಾತನಾಡುತ್ತಿದ್ದಾರೆ, ರೈತರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾ ನಿರತರು ನಟ ದರ್ಶನ್​ ವಿರುದ್ದ ದಿಕ್ಕಾರ ಕೂಗಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಈ ವೆಳೆ ಮಂಡ್ಯ ಜಿಲ್ಲಾ ಹಿತರಕ್ಷಣಾ ಸಮಿತಿ  ಸದಸ್ಯರು ಹಾಗೂ ಸ್ಥಳೀಯರು ಇದ್ದರು.

RELATED ARTICLES

Related Articles

TRENDING ARTICLES