Monday, December 23, 2024

ಇದು ಸ್ಟಾಲಿನ್ ಅಧೀನದಲ್ಲಿರುವ ಬಾಡಿಗೆ ಸರ್ಕಾರವೇ? : ಕುಮಾರಸ್ವಾಮಿ

ಬೆಂಗಳೂರು : ಇದೇನು ಕನ್ನಡಿಗರ ಸರ್ಕಾರವೋ? ಅಥವಾ ತಮಿಳುನಾಡು ಸಿಎಂ ಸ್ಟಾಲಿನ್ ಅಧೀನದಲ್ಲಿರುವ ಬಾಡಿಗೆ ಸರ್ಕಾರವೋ? ಇಷ್ಟಕ್ಕೂ ಕನ್ನಡಿಗರು ವೋಟು ಹಾಕಿದ್ದು ಯಾರಿಗೆ?ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಗುಡುಗಿದ್ದಾರೆ.

ಹೋರಾಟ ಮಾಡುತ್ತಿದ್ದ್ ರೈತರನ್ನು ವಶಕ್ಕೆ ಪಡೆದ ಕ್ರಮವನ್ನು ಖಂಡಿಸಿರುವ ಅವರು, ಇದೆಂಥಾ ಚೋದ್ಯ? ಒಂದು ಕಡೆ ಮೇಕೆದಾಟು ಬೇಕು ಎಂದು ಪಾದಯಾತ್ರೆ ಮಾಡಿದವರು, ಇಂದು ಕಾವೇರಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದ ರೈತರನ್ನು, ಹೋರಾಟಗಾರರನ್ನು ಬಂಧಿಸಿದ್ದಾರೆ. ರಾತ್ರೋರಾತ್ರಿ ಹೋರಾಟಗಾರರನ್ನು ಬಂಧಿಸಿರುವುದು ಕಾಂಗ್ರೆಸ್​ ಸರ್ಕಾರದ ಕಿಡಿಗೇಡಿತನದ ಪರಮಾವಧಿ ಎಂದು ಕುಟುಕಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ಸಿಗರಿಗೆ ಒಂದು ನ್ಯಾಯ, ಕನ್ನಡಿಗರಿಗೆ ಇನ್ನೊಂದು ನ್ಯಾಯ ಎನ್ನುವುದು ಇದೆಯಾ? ಕೋವಿಡ್ ನಿಯಮ ಉಲ್ಲಂಘಿಸಿ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆ ಮಾಡಬಹುದಾದರೆ, ನಾಡಿನ ಜೀವನಾಡಿ ಕಾವೇರಿಗಾಗಿ ಕನ್ನಡಿಗರು ಪ್ರತಿಭಟನೆ ನಡೆಸಬಾರದೇ? ಶಾಂತವಾಗಿ ಹೋರಾಟ ನಡೆಸುತ್ತಿದ್ದ ರೈತರು, ಹೋರಾಟಗರನ್ನು ಬಂಧಿಸಿರುವುದು ಖಂಡನೀಯ ಎಂದು ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಡಿಎಂಕೆ ಪಕ್ಷದ ‘ಬಿ’ ಟೀಂ

ಹೋರಾಟಗಾರರು, ರೈತರನ್ನು ಕೂಡಲೇ ಬಂಧಮುಕ್ತಗೊಳಿಸಬೇಕು. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಬೇಕು. ಕಾಂಗ್ರೆಸ್ ಪಕ್ಷವು ಡಿಎಂಕೆ ಪಕ್ಷದ ‘ಬಿ’ ಟೀಂ ಆಗಿ ಪರಿವರ್ತನೆ ಆದ ಪರಿಣಾಮವೇ ಈ ಕಾವೇರಿ ಬಿಕ್ಕಟ್ಟು ಎನ್ನುವುದು ಕನ್ನಡಿಗರಿಗೆ ಈಗ ಸ್ಪಷ್ಟವಾಗಿ ಅರ್ಥವಾಗಿದೆ ಎಂದು ಕುಮಾರಸ್ವಾಮಿ ಚಾಟಿ ಬೀಸಿದ್ದಾರೆ.

RELATED ARTICLES

Related Articles

TRENDING ARTICLES