Wednesday, January 22, 2025

ಕಾಂಗ್ರೆಸ್ ಸರ್ಕಾರ ನೀರಗಂಟಿ ಸರ್ಕಾರ : ಕುರುಬೂರು ಶಾಂತಕುಮಾರ್

ಬೆಂಗಳೂರು : ಕಾಂಗ್ರೆಸ್​ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರು ಹರಿಸಿ ನೀರುಗಂಟಿ ಕೆಲಸ ಮಾಡುತ್ತಿದೆ. ಈ ಸರ್ಕಾರ ನೀರಗಂಟಿ ಸರ್ಕಾರ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಕಿಡಿಕಾರಿದರು.

ಬೆಂಗಳೂರಿನ  ಮೈಸೂರು ಬ್ಯಾಂಕ್​ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿದ್ದ 20ಕ್ಕೂ ಹೆಚ್ಚು ರೈತ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಇದಕ್ಕೆ ಕುರುಬೂರು ಶಾಂತಕುಮಾರ್ ಆಕ್ರೋಶ ಹೊರಹಾಕಿದರು.

ರಾಜ್ಯ ಸರ್ಕಾರ ಪ್ರತಿಭಟನೆಯನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ. ಬಂದ್ ದಿಕ್ಕು ತಪ್ಪಿಸುವ ಕೆಲಸವಾಗಬಾರದು. ಜಲ್ಲಿಕಟ್ಟು ಆದಾಗ ತಮಿಳುನಾಡು ಪೋಲಿಸರು ಸಹಕಾರ ನೀಡಿದರು. ಇಲ್ಲಿ ಪೋಲಿಸರು ಪ್ರತಿಭಟನೆ ಮಾಡುವವರಿಗೆ ಕೆಲವೊಂದು ಸಮಸ್ಯೆ ಆಗುತ್ತಿದೆ ಎಂದು ಗೊತ್ತಾಗಿದೆ. ಸದ್ಯದವರೆಗೂ ಬಂದ್ ಯಶಸ್ವಿಯಾಗಿದೆ ಎಂದು ಹೇಳಿದರು.

ಪೋಲಿಸರು ಎಚ್ಚರಿಕೆಯಿಂದ ಇರಬೇಕು

ಬೆಂಗಳೂರು ಬಂದ್​ಗೆ ಎಲ್ಲರೂ ಬೆಂಬಲ ನೀಡಿದ್ದಾರೆ. ಪೊಲೀಸ್ ಇಲಾಖೆ 144 ಸೆಕ್ಷನ್ ಹಾಕಬಾರದಿತ್ತು. ನಮ್ಮ ಹೋರಾಟ, ಚಳುವಳಿ ಮುಂದುವರಿಯಲಿದೆ. ನಾವು ಇದೀಗ ಟೌನ್‌ಹಾಲ್‌ಗೆ ತೆರಳುತ್ತಿದ್ದೇವೆ. ಈ ಹೋರಾಟದ ಮೂಲಕ ಇಡೀ ರಾಜ್ಯಕ್ಕೆ ಸಂದೇಶ ಹೋಗುತ್ತದೆ. ಪೋಲಿಸರು ಎಚ್ಚರಿಕೆಯಿಂದ ಇರಬೇಕು ಎಂದು ಕುರುಬೂರು ಶಾಂತಕುಮಾರ್ ತಿಳಿಸಿದರು.

RELATED ARTICLES

Related Articles

TRENDING ARTICLES