Monday, December 23, 2024

ಫ್ರೀಡಂ ಪಾರ್ಕ್​ನಲ್ಲಿ ರೈತ ನೇಣು ಹಾಕಿಕೊಳ್ಳುವ ಯತ್ನ

ಬೆಂಗಳೂರು : ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನಾ ನಿರತ ರೈತನೊಬ್ಬ ಸರ್ಕಾರದ ನಡೆಯನ್ನು ಖಂಡಿಸಿ ಟವಲ್​ನಿಂದ ಮರಕ್ಕೆ ನೇಣು ಹಾಕಿಕೊಳ್ಳಲು ಯತ್ನಿಸಿದ್ದಾರೆ.

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿ ವಿವಿಧ ಸಂಘಟನೆಗಳು ಬೆಂಗಳೂರು ಬಂದ್​​ಗೆ ಕರೆಕೊಟ್ಟಿದೆ. ಬೆಂಗಳೂರಿನಲ್ಲಿ ಪ್ರತಿಭಟನೆಯ ಕಿಚ್ಚು ಹೆಚ್ಚಾಗಿದೆ.

ಮೈಸೂರು ಬ್ಯಾಂಕ್​ ವೃತ್ತದಲ್ಲಿ ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದ 20ಕ್ಕೂ ಹೆಚ್ಚು ರೈತ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದಿದ್ದಾರೆ. ಬಳಿಕ, ರೈತರು ಫ್ರೀಡಂ ಪಾರ್ಕ್​ನತ್ತ ತೆರಳಿ ಪ್ರತಿಭಟನೆ ಮುಂದುವರಿಸಿದ್ದಾರೆ. ಈ ವೇಳೆ ರೈತನೋರ್ವ ಆತ್ಮಹತ್ಯೆ ಯತ್ನ ಮಾಡಿದ್ದಾನೆ. ಕೂಡಲೇ ಪೊಲೀಸರು ಆತನನ್ನು ತಡೆದಿದ್ದಾರೆ.

ಈ ಬಂದ್‌ಗೆ 100ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ. ಪ್ರತಿಪಕ್ಷಗಳಾದ ಬಿಜೆಪಿ, ಜೆಡಿಎಸ್ ಹಾಗೂ ಎಎಪಿ ಪಕ್ಷಗಳು ಇಂದಿನ ಬಂದ್‌ಗೆ ಬೆಂಬಲ ಸೂಚಿಸಿರುವುದರಿಂದ ಪ್ರತಿಭಟನೆಯ ಕಾವು ಜೋರಾಗಿದೆ. ಬೆಳಗ್ಗೆ 6 ಗಂಟೆಯಿಂದಲೇ ಬೆಂಗಳೂರು ಬಂದ್ ನಡೆಯಲಿದ್ದು, ಸಂಜೆ 6 ಗಂಟೆಯವರೆಗೂ ಬಂದ್ ಮುಂದುವರಿಯಲಿದೆ.

RELATED ARTICLES

Related Articles

TRENDING ARTICLES