Wednesday, January 22, 2025

ಬೆಂಗಳೂರು ಬಂದ್​ ಗೆ ಕನ್ನಡ ಚಿತ್ರರಂಗದ ಪೋಷಕ ನಟರ ಸಂಘ ಸಾಥ್​!

ಬೆಂಗಳೂರು : ಸುಪ್ರೀಂ ಕೋರ್ಟ್​ ತಮಿಳುನಾಡಿಗೆ ನಿತ್ಯ 5 ಸಾವಿರ ಕ್ಯೂಸೆಕ್ಸ್​ ಕಾವೇರಿ ನೀರು ಹರಿಸುವಂತೆ ನೀಡಿರುವ ಆದೇಶವನ್ನು ವಿರೋಧಿಸಿ ಇಂದು ಬೆಂಗಳೂರು ಬಂದ್​ ಆಚರಿಸಲಾಗುತ್ತಿದ್ದು  ಪ್ರತಿಭಟನೆಗೆ ವಿವಿಧ ಕನ್ನಡ ಪರ ಸಂಘಟನೆಗಳು ಹಾಗೂ ರೈತರು ಇಂದು(ಮಂಗಳಾವರ) ಬೆಂಗಳೂರು ಬಂದ್‌ಗೆ ಕರೆ ನೀಡಿವೆ.

ಹೀಗಾಗಿ ಇಂದು ಬೆಂಗಳೂರಿನಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನ ಕೂಗಿ ಆಕ್ರೋಶವನ್ನ ವ್ಯಕ್ತಪಡಿಸಿದ್ದಾರೆ. ಇನ್ನು ಇಂದಿನ ಬೆಂಗಳೂರು ಬಂದ್‌ ಹಾಗೂ ಕಾವೇರಿ ಹೋರಾಟಕ್ಕೆ ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್‌ ಸೇರಿದಂತೆ, ಕರ್ನಾಟಕ ಚಲನಚಿತ್ರ ಪೋಷಕ ಕಲಾವಿದರ ಸಂಘ, ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಸೇರಿದಂತೆ ವಿವಿಧ ಕನ್ನಡ ಪರ ಸಂಘಟನೆಗಳು ಬೆಂಬಲ ಸೂಚಿಸಿವೆ.

ಇದನ್ನೂ ಓದಿ: ದೇಶಪ್ರೇಮಿ ರಾಯಣ್ಣನ ಹೆಸರಲ್ಲಿ 110 ಎಕರೆಯಲ್ಲಿ ಸೈನಿಕ ಶಾಲೆ : ಸಿಎಂ ಸಿದ್ದರಾಮಯ್ಯ

ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರ ನೇತೃತ್ವದಲ್ಲಿ ಇಂದು ಬೆಂಗಳೂರ ನಗರದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಗೆ ನೂರಾರು ಜನರು ಬೆಂಬಲಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ

RELATED ARTICLES

Related Articles

TRENDING ARTICLES