ಬೆಂಗಳೂರು : ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲ್ ಅರ ಪತ್ನಿ ಶಾರದಾ ಪಾಟೀಲ್ (93) ಅವರು ವಿಧಿವಶರಾಗಿದ್ದಾರೆ.
ಬಂಗಳೂರಿನ ಸದಾಶಿವನಗರ ತಮ್ಮ ಸ್ವಗೃಹದಲ್ಲಿ ವಯೋಸಹಜ ಕಾಯಿಲೆಯಿಂದ ಇಂದು ನಿಧನರಾಗಿದ್ದು, ಮಾಜಿ ಶಾಸಕ ಕೈಲಾಸನಾಥ್ ಮತ್ತು ಇಬ್ಬರು ಪುತ್ರಿಯರನ್ನು ಅವರು ಅಗಲಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಪುತ್ರ ಕೈಲಾಸನಾಥ್ ಅವರು, ಬುಧವಾರ ಮಧ್ಯಾಹ್ನದ ಬಳಿಕ ಕಲಬುರಗಿ ಜಿಲ್ಲೆಯ ಚಿಂಚೋಳಿಯಲ್ಲಿರುವ ತಂದೆ ವೀರೇಂದ್ರ ಪಾಟೀಲರ ಸಮಾಧಿ ಪಕ್ಕದಲ್ಲಿಯೇ ಶಾರದಾ ಪಾಟೀಲರ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಹೇಳಿದ್ದಾರೆ.
ದಿವಂಗತ ವೀರೇಂದ್ರ ಪಾಟೀಲ್ ಅವರು 1968 ರಿಂದ 1971 ಹಾಗೂ 1989 ರಿಂದ 1990 ರವರೆಗೆ ಎರಡು ಅವಧಿಗೆ ಮುಖ್ಯಮಂತ್ರಿ ಆಗಿ ಸೇವೆ ಸಲ್ಲಿಸಿದ್ದರು.