Sunday, January 19, 2025

ಮದ್ಯದ ದರ ಹೆಚ್ಚಳದಿಂದ ಆದಾಯ ಕಡಿಮೆಯಾಗಿದೆ: ಬಸವರಾಜ ಬೊಮ್ಮಾಯಿ

ಬೆಂಗಳೂರು : ರಾಜ್ಯ ಸರ್ಕಾರ ಮದ್ಯದ ಮೇಲೆ ತೆರಿಗೆ ಹೆಚ್ಚಳ ಮಾಡಿದ್ದರಿಂದ ಅಬಕಾರಿ ಆದಾಯ ಕಡಿಮೆಯಾಗಿದೆ. ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ರಾಜ್ಯದಲ್ಲಿ ಮದ್ಯದ ದರ ಹೆಚ್ಚಳವಾಗಿದೆ. ಹೀಗಾಗಿ ಗೋವಾ ಹಾಗೂ ಮಹಾರಾಷ್ಟ್ರದಿಂದ ಅಕ್ರಮ ಮದ್ಯ ಸರಬರಾಜಾಗುತ್ತಿದೆ ಎಂದು ಮಾಜಿ ಮುಖ್ಯಮಮತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ‌.

ನಗರದಲ್ಲಿ ಮಾತನಾಡಿದ ಅವರು , ರಾಜ್ಯ ಸರ್ಕಾರ ಪಂಚಾಯತಿ ಮಟ್ಟದಲ್ಲಿ ಮದ್ಯ ಮಾರಾಟ ಮಾಡಲು ಹೊರಟಿದ್ದು ದುರದೃಷ್ಟಕರ, ಇವರು ಮದ್ಯದ ಬೆಲೆ ಹೆಚ್ಚಳ ಮಾಡಿದ್ದರಿಂದ ಆದಾಯ ಕಡಿಮೆಯಾಗಿದೆ. ಇವರು ಗೃಹಲಕ್ಷ್ಮಿಗೆ ನೀಡಿದ ಹಣವನ್ನು ವಾಪಸ್ ಪಡೆಯಲು ಈ ಮಾರ್ಗ ಅನುಸರಿಸುತ್ತಿದ್ದಾರೆ. ಇದರಿಂದ ಜನರ ಆರೋಗ್ಯ ಹದಗೆಡಿಸುವ ಕೆಲಸ ಮಾಡುತ್ತಿದೆ.

ಇದನ್ನೂ ಓದಿ: ಕಾಲುಬಾಯಿ ರೋಗ ಲಸಿಕೆ ಅಭಿಯಾನಕ್ಕೆ ಸಚಿವ ಕೆ.ಹೆಚ್ ಮುನಿಯಪ್ಪ ಚಾಲನೆ!

ರಾಜ್ಯ ಸರ್ಕಾರ ತಕ್ಷಣ ಈ ತೀರ್ಮಾನ ಹಿಂಪಡೆಯಬೇಕು. ರಾಜ್ಯದಲ್ಲಿ ದರ ಹೆಚ್ಚಳ ಮಾಡಿರುವುದರಿಂದ ಮಹಾರಾಷ್ಟ್ರ ಮತ್ತು ಗೋವಾದಿಂದ ಅಕ್ರಮವಾಗಿ ಮದ್ಯ ಸರಬರಾಜಾಗುತ್ತಿದೆ. ಇದರಿಂದ ಕುಟುಂಬಗಳು ಹಾಳಾಗುತ್ತವೆ. ಸರ್ಕಾರದ ಈ ನಿರ್ಧಾರವನ್ನು ಎಲ್ಲರೂ ವಿರೋಧಿಸಬೇಕು ಎಂದು ಮನವಿ ಮಾಡಿದರು.

RELATED ARTICLES

Related Articles

TRENDING ARTICLES