Sunday, November 3, 2024

ತಮಿಳುನಾಡು ರೈತರಿಗೂ ಕುರವೈ ಬೆಳೆಗೆ ನೀರು ಸಿಗಲಿ ಆದ್ರೆ.. : ನಟ ಸುದೀಪ್ ಪೋಸ್ಟ್

ಬೆಂಗಳೂರು : ಕಾವೇರಿ ನೀರಿಗಾಗಿ ರೈತರು, ಕನ್ನಡಪರ ಹೋರಾಟಗಾರರು ನಡೆಸುತ್ತಿರುವ ಹೋರಾಟಕ್ಕೆ ನಟ ಕಿಚ್ಚ ಸುದೀಪ್ ಬೆಂಬಲ ಸೂಚಿಸಿದ್ದಾರೆ.

ಈ ಕುರಿತು Xನಲ್ಲಿ ಪೋಸ್ಟ್ ಮಾಡರುವ ಅವರು, ತಮಿಳುನಾಡು ರೈತರಿಗೂ ಕುರವೈ ಬೆಳೆಗೆ ನೀರು ಸಿಗಲಿ. ಆದರೆ, ನಮ್ಮ ಕುಡಿಯುವ ನೀರಿನ ಅಭಾವ ಮೊದಲು ಬಗೆಹರಿಯಲಿ. ಆದಷ್ಟು ಬೇಗ ಈ ಸಮಸ್ಯೆ ಬಗೆಹರಿದು ಹೋರಾಟಕ್ಕೆ ಜಯವಾಗಲಿ ಎಂದು ಹೇಳಿದ್ದಾರೆ.

ಕಾವೇರಿ ಸಮಸ್ಯೆ ಈ ವರ್ಷವೂ ಶುರುವಾಗಿದೆ. ಕನ್ನಡ ಪರ ಸಂಘಟನೆಗಳು ರೈತರು ಹೋರಾಟ ನೆಡೆಸುತ್ತಿದ್ದಾರೆ. ಕಾವೇರಿ ಜೊತೆಗೆ ಉತ್ತರ ಕರ್ನಾಟಕದ ಕೃಷ್ಣಾ ನದಿ, ಮಹದಾಯಿ ನದಿ ಮತ್ತು ಕಳಸಾ ಬಂಡೂರಿ ವಿವಾದಗಳು ಬಗೆಹರಿದು ಜನರ ಸಂಕಷ್ಟ ತೀರಲೆಂದು ಆಶಿಸುವೆ. ಕನ್ನಡದ ನೆಲ, ಜಲ, ಭಾಷೆಯ ಎಲ್ಲ ಹೋರಾಟಗಳಲ್ಲಿ ನಾನು ಸದಾ ನಿಮ್ಮೊಂದಿಗೆ ಇದ್ದೇನೆ ಎಂದು ಅಭಯ ನೀಡಿದ್ದಾರೆ.

ನಾವು ಕಾವೇರಿಯನ್ನೇ ನಂಬಿದ್ದೇವೆ

ಮುಂಗಾರುಮಳೆಯ ಅಭಾವದಿಂದ ರೈತರಿಗೆ ಜನತೆಯ ಕೃಷಿ ಮಾತ್ರವಲ್ಲದೆ ಕುಡಿಯುವ ನೀರಿಗೆ ತೀವ್ರ ತೊಂದರೆಯಾಗಿದೆ. ಮುಂಗಾರಿನ ಹೊರತಾಗಿ ನಮಗೆ ಕುಡಿಯುವ ನೀರಿಗಾಗಿ ಬೇರೆ ಮೂಲಗಳಿಲ್ಲ ನಾವು ಕಾವೇರಿಯನ್ನೇ ನಂಬಿದ್ದೇವೆ. ನಾನು ತಿಳಿದುಕೊಂಡಂತೆ ಬರ ಅಧ್ಯಯನ ಸಮಿತಿ, ಕಾವೇರಿ ಸಮಿತಿಯ ತಂತ್ರಜ್ಞರು ಕೂಡಲೇ ಟ್ರಿಬ್ಯುನಲ್ ನ್ಯಾಯಾಲಯಕ್ಕೆ ಮತ್ತು ಕೇಂದ್ರ ಸರ್ಕಾರಕ್ಕೆ ಪ್ರಸ್ತುತ ಕರ್ನಾಟಕದ ಬರ ಪರಿಸ್ಥಿತಿ ಯನ್ನು ತುರ್ತಾಗಿ ಮನವರಿಕೆ ಮಾಡಿಕೊಡಬೇಕಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕದ ಪರಿಸ್ಥಿಯನ್ನು ಅರ್ಥ ಮಾಡಿಸಿ

ಹಿಂದಿನ ಕೆಲವು ಮುಖ್ಯಮಂತ್ರಿ ಗಳಂತೆಯೇ ಸಿದ್ದರಾಮಯ್ಯನವರು ತಮಿಳುನಾಡಿನ ಮುಖ್ಯ ಮಂತ್ರಿ ಎಂ.ಕೆ ಸ್ಟಾಲಿನ್​ ಅವರೊಂದಿಗೆ ಸೌಹಾರ್ದ ಮಾತುಕತೆಯ ಮೂಲಕ ಸಮಸ್ಯೆಯನ್ನು ತಾತ್ಕಾಲಿಕವಾಗಿ ಬಗೆಹರಿಸಬಹುದು ಅಂತ ಹಿರಿಯರು ಹೇಳಿದ್ದನ್ನು ಕೇಳಿ ತಿಳಿದುಕೊಂಡಿದ್ದೇನೆ. ಸದ್ಯದ ಬರ, ಜಲ ಹಾಹಾಕಾರಕ್ಕೆ ಪರಿಹಾರ ಒದಗಿಸಲು ಸಿದ್ದರಾಮಯ್ಯನವರಲ್ಲಿ ಮನವಿ ಮಾಡುತ್ತೇನೆ. ಕೇಂದ್ರ ಸರ್ಕಾರಕ್ಕೆ ಕರ್ನಾಟಕದ ಪರಿಸ್ಥಿಯನ್ನು ಅರ್ಥ ಮಾಡಿಸಲು ಎಲ್ಲ ಪಕ್ಷದ ನಾಯಕರು ಒಗ್ಗಟ್ಟಾಗಿ ಮುಂದಾಗಲು ಮನವಿ ಮಾಡುತ್ತೇನೆ. ‘ನಮ್ಮ ಜಲ ನಮ್ಮ ಹಕ್ಕು’ ಎಂದು ಪೋಸ್ಟ್​ ಮಾಡಿದ್ದಾರೆ.

RELATED ARTICLES

Related Articles

TRENDING ARTICLES