Wednesday, January 22, 2025

ಕಾಲುಬಾಯಿ ರೋಗ ಲಸಿಕೆ ಅಭಿಯಾನಕ್ಕೆ ಸಚಿವ ಕೆ.ಹೆಚ್ ಮುನಿಯಪ್ಪ ಚಾಲನೆ!

ಬೆಂಗಳೂರು ಗ್ರಾಮಾಂತರ ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ದೇವನಹಳ್ಳಿಯ ಪಶುಆಸ್ಪತ್ರೆ ಬಳಿ ಏರ್ಪಡಿಸಲಾಗಿದ್ದ 4 ನೇ ಸುತ್ತಿನ ಉಚಿತ ಕಾಲು ಬಾಯಿ ರೋಗ ಲಸಿಕೆ ಅಭಿಯಾನಕ್ಕೆ ಅಹಾರ,ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಫಲಾನುಭವಿ ರೈತರಿಗೆ 2 ಹೆಚ್.ಪಿ ವಿದ್ಯುತ್ ಚಾಲಿತ ಮೇವು ಕತ್ತರಿಸುವ ಯಂತ್ರ ಮತ್ತು 02 ನೆಲಹಾಸು(ರಬ್ಬರ್ ಮ್ಯಾಟ್)ಗಳನ್ನು ವಿತರಿಸಲಾಯಿತು.

ಇದನ್ನೂ ಓದಿ : ಮಕ್ಕಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಕೊಡುಗೆ ಅಪಾರ: ಸಚಿವ ಕೆ.ಹೆಚ್ ಮುನಿಯಪ್ಪ

ಈ ಕಾರ್ಯಕ್ರಮದಲ್ಲಿ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕರಾದ ಡಾ.ಜಗದೀಶ್ ಕುಮಾರ್, ತಾಲ್ಲೂಕಿನ ವೈದ್ಯಾಧಿಕಾರಿ ಡಾ.ಅನಿಲ್ ಕುಮಾರ್ ಎನ್, ತಹಶೀಲ್ದಾರ್ ಶಿವರಾಜ್, ಪಶುಸಂಗೋಪನೆ ಇಲಾಖೆ ಅಧಿಕಾರಿಗಳು, ಸಿಬ್ಬಂದಿ, ಜನಪ್ರತಿನಿಧಿಗಳು, ಮುಖಂಡರು ಉಪಸ್ಥಿತರಿದ್ದರು.

RELATED ARTICLES

Related Articles

TRENDING ARTICLES